ಅಬಕಾರಿ ಸಚಿವ ಗೋಪಾಲಯ್ಯ 
ರಾಜ್ಯ

ಹಾಸನದಲ್ಲಿ ವಾರದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್: ಸಚಿವ ಗೋಪಾಲಯ್ಯ

ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವಿಕೆ ಪ್ರಮಾಣ ದಿನೇದಿನೇ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ತಿಳಿಸಿದ್ದಾರೆ.

ಹಾಸನ: ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವಿಕೆ ಪ್ರಮಾಣ ದಿನೇದಿನೇ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರು ಬುಧವಾರ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಳೀಯ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆ ಕೊರೋನಾ ಸೋಂಕು ಹರಡುವಿಕೆ ಪ್ರಮಾಣದಲ್ಲಿ ಎರಡನೇ ಸ್ಥಾನದಲ್ಲಿದೆ‌. ಕೊರೋನಾ ಹಾವಳಿ ಹತೋಟಿಗೆ ತರುವ ನಿಟ್ಟಿನಲ್ಲಿ  ಸೋಮವಾರ, ಬುಧವಾರ, ಶುಕ್ರವಾರ ಬೆಳಗ್ಗೆ 6 ರಿಂದ 10 ಗಂಟೆ ವರೆಗೂ ಎಲ್ಲಾ ರೀತಿಯ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಿ ಉಳಿದ ನಾಲ್ಕು ದಿನ ಹಾಲು- ಔಷಧಗಳನ್ನು ಹೊರತುಪಡಿಸಿ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಸಂಪೂರ್ಣ ಬಂದ್‌ ಮಾಡುವ ಆದೇಶ ಹೊರಡಿಸಲಾಗಿದೆ ಎಂದರು.

ಈ ಸಂಬಂಧ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕೆ ಜಿಲ್ಲೆಯ ಜನರು ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ