ರಾಜ್ಯ

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಪಾವತಿಗೆ ಶೇ.5 ರಿಯಾಯತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

Srinivasamurthy VN

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆಯ ಪಾವತಿಗೆ ನೀಡಲಾಗುತ್ತಿರುವ ಶೇ.5 ರ ರಿಯಾಯತಿ ಅವಧಿಯನ್ನು ಸರ್ಕಾರ ಜೂನ್ 30ರವರೆಗೆ ವಿಸ್ತರಿಸಿದೆ.

ಆಸ್ತಿ ತೆರಿಗೆಯನ್ನು ಆರ್ಥಿಕ ವರ್ಷದ ಏಪ್ರಿಲ್ ತಿಂಗಳಲ್ಲಿ ಪಾವತಿಸಿದಲ್ಲಿ ಆಸ್ತಿ ತೆರಿಗೆ ಮೊತ್ತದಲ್ಲಿ ಶೇ.5 ರಷ್ಟು ರಿಯಾಯತಿಯನ್ನು ನೀಡಲು ಅವಕಾಶವಿರುತ್ತದೆ . ಕರೋನಾ ವೈರಸ್ (ಕೋವಿಡ್-19) ರೋಗವು ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ 2021-22ನೇ ಸಾಲಿನ ಆಸ್ತಿ ತೆರಿಗೆಯ ಪಾವತಿಗೆ  ನೀಡಲಾಗುತ್ತಿರುವ ಶೇ.5 ರಷ್ಟು ರಿಯಾಯತಿ ಅವಧಿಯನ್ನು ವಿಸ್ತರಿಸಲು ಕೋರಿ ಜನ ಪ್ರತಿನಿಧಿಗಳು ಮತ್ತು ನಗರ ಸ್ಥಳೀಯ ಸಂಸ್ಯೆಗಳಿಂದ ಮನವಿಯನ್ನು ಪುರಸ್ಕರಿಸಿರುವ ಸರ್ಕಾರ, ಲಾಕ್ ಡೌನ್ ಹಿನ್ನಲೆಯಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಮತ್ತು ಪ್ರತ್ಯೇಕತೆಗೆ ಹೆಚ್ಚಿನ ಗಮನ ಹರಿಸುವ ದೃಷ್ಟಿಯಿಂದ  2020-21 ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ನೀಡಲಾಗುವ ಶೇ.5 ರಷ್ಟು ರಿಯಾಯತಿ ಅವಧಿಯನ್ನು ದಿನಾಂಕ ಮಾರ್ಚ್ 18 18-03-2021 ರವರೆಗೆ ವಿಸ್ತರಿಸಿ ಕರ್ನಾಟಕ ಮಹಾನಗರಪಾಲಿಕೆಗಳ ಅಧಿನಿಯಮ 1976 ರ ಕಲಂ 112 (ಎ) (1) ಮತ್ತು ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಕಲಂ.105 (1)  ಕ್ಕೆ ತಿದ್ದುಪಡಿ ತರಲಾಗಿರುತ್ತದೆ. 

2021-22ನೇ ಸಾಲಿನ ಏಪ್ರಿಲ್ ಮಾಹೆಯಲ್ಲಿ ಕೊವಿಡ್-19 ರ ಸಾಂಕ್ರಾಮಿಕ ರೋಗದ ಎರಡನೇ ಆಲೆಯು ಅತಿ ತೀವ್ರವಾಗಿ ಹರಡುತ್ತಿರುವುದರಿಂದ ಸಾರ್ವಜನಿಕರು ಸಾಮಾಜಿಕ ಅಂತರ ಮತ್ತು ಪ್ರತ್ಯೇಕತೆಗೆ ಹೆಚ್ಚಿನ ಗಮನ ಹರಿಸಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರವು ಅಗತ್ಯ ಸೇವೆಗಳನ್ನು ಹೊರತುಪಡಿಸಿ  ಉಳಿದ ವ್ಯಾಪಾರ ವಹಿವಾಟುಗಳನ್ನು ಸ್ಮಗಿತಗೊಳಿಸಿರುತ್ತದೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ನಗರ ಸ್ಥಳೀಯ ಸಂಸ್ಕೃಗಳು 2021-22 ಸಾಲಿನ ಆರ್ಥಿಕ ವರ್ಷದ ಏಪ್ರಿಲ್ ತಿಂಗಳಲ್ಲಿ ಆಸ್ತಿ ತೆರಿಗೆ ಪಾವತಿಗೆ ನೀಡಲಾಗುತ್ತಿರುವ ಶೇ.5 ರ ರಿಯಾಯತಿಯ ಕಾಲಾವಧಿಯನ್ನು ಬಿಬಿಎಂಪಿ ಹೊರತುಪಡಿಸಿ ಜೂನ್ 30ರವರೆಗೆ ವಿಸ್ತರಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

SCROLL FOR NEXT