ರಾಜ್ಯ

ಸಿಬ್ಬಂದಿ ಸಮಯಪ್ರಜ್ಞೆ: ಮೈಸೂರು ಕೆಆರ್ ಆಸ್ಪತ್ರೆಯಲ್ಲಿ ತಪ್ಪಿದ ಭಾರೀ ದುರಂತ

Lingaraj Badiger

ಮೈಸೂರು: ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲಾಗಿರುವ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಕೃಷ್ಣರಾಜ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ಭಾರೀ ದುರಂತ ತಪ್ಪಿದೆ.

ಕೆಲ ತಾಂತ್ರಿಕ ತೊಂದರೆಯಿಂದಾಗಿ ಆಮ್ಲಜನಕ ಟ್ಯಾಂಕ್ ಹೆಪ್ಪುಗಟ್ಟಿದ್ದರಿಂದ ಕೊಳವೆಗಳಲ್ಲಿ ಪೂರೈಕೆ ಸ್ಥಗಿತಗೊಂಡಿತ್ತು. ಇದನ್ನು ಗಮನಿಸಿದ ಆಸ್ಪತ್ರೆಯ ಸಿಬ್ಬಂದಿ ತಕ್ಷಣವೇ ಉನ್ನತ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಅದರಂತೆ, ಅಗ್ನಿಶಾಮಕ ಮತ್ತು ತುರ್ತು ಸೇವಾ ವಿಭಾಗದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಕೊಳವೆಗಳು ಮತ್ತು ತೊಟ್ಟಿಯ ಮೇಲೆ ನೀರನ್ನು ಸಿಂಪಡಿಸಿ, ತಾಪಮಾನವನ್ನು ಸಾಮಾನ್ಯ ಸ್ಥಿತಿಗೆ ತಂದಿದ್ದಾರೆ.

ಇದು 6,000 ಕಿಲೋ ಲೀಟರ್ ಸಾಮರ್ಥ್ಯದ ದ್ರವೀಕೃತ ಆಮ್ಲಜನಕ ಘಟಕವಾಗಿದ್ದು, ಅನಿಲವನ್ನು -16 ರಿಂದ -18 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಆಸ್ಪತ್ರೆಯಲ್ಲಿ 800 ಕೋವಿಡ್ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

SCROLL FOR NEXT