ಸಾಂದರ್ಭಿಕ ಚಿತ್ರ 
ರಾಜ್ಯ

ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ: 90 ಮಂದಿ ಬಂಧನ

ರೆಮಿಡಿಸಿವಿರ್ ಔಷಧವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಸುಮಾರು 90 ಮಂದಿಯನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್‍ ಮಹಾ ನಿರ್ದೇಶಕ ಪ್ರವೀಣ್‍ ಸೂದ್ ಅವರು ಗುರುವಾರ ತಿಳಿಸಿದ್ದಾರೆ.

ಬೆಂಗಳೂರು: ರೆಮಿಡಿಸಿವಿರ್ ಔಷಧವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಸುಮಾರು 90 ಮಂದಿಯನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್‍ ಮಹಾ ನಿರ್ದೇಶಕ ಪ್ರವೀಣ್‍ ಸೂದ್ ಅವರು ಗುರುವಾರ ತಿಳಿಸಿದ್ದಾರೆ.

ವೈರಾಣು ನಿಗ್ರಹ ರೆಮಿಡಿಸಿವಿರ್ ಔಷಧವನ್ನು ಕೋವಿಡ್‍-19 ಚಿಕಿತ್ಸೆಗೆ ಬಳಸಲಾಗುತ್ತಿದೆ.

ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ ಮಾಡುತ್ತಿದ್ದ 90 ಜನರನ್ನು ಬಂಧಿಸಲಾಗಿದ್ದು, ನಕಲಿ ರೆಮಿಡಿಸಿವಿರ್ ಔಷಧವನ್ನು ಪ್ಯಾಕಿಂಗ್ ಮಾಡುತ್ತಿದ್ದ 38 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರವೀಣ್‍ ಸೂದ್ ಟ್ವೀಟ್ ಮಾಡಿದ್ದಾರೆ.

ಬಿಕ್ಕಟ್ಟಿನ ಪರಿಸ್ಥಿತಿಯ ಲಾಭವನ್ನು ಪಡೆದು ಕಾನೂನು ಬಾಹಿರವಾಗಿ ಹಣಗಳಿಸುವವರನ್ನು ಸೆರೆ ಹಿಡಿಯಲು ನಡೆಸಿದ ಕಾರ್ಯಾಚರಣೆ ಭಾಗವಾಗಿ ಇವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ತೀವ್ರ ಏರಿಕೆ ಹಿನ್ನೆಲೆಯಲ್ಲಿ ರೆಮಿಡಿಸಿವಿರ್ ಔಷಧಕ್ಕೆ ಹೆಚ್ಚು ಬೇಡಿಕೆ ಇದೆ. ರೆಮಿಡಿಸಿವಿರ್ ಔಷಧವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.‍ಯಡಿಯೂರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ