ರಾಜ್ಯ

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಜೂನ್ ತಿಂಗಳಲ್ಲಿ ಪುನರ್ಮನನ ತರಗತಿ: ಬೇಸಿಗೆ ರಜೆ ವಿಸ್ತರಣೆ

Shilpa D

ಬೆಂಗಳೂರು: 2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಜೂನ್‌ 1ರಿಂದ 14ರವರೆಗೆ ಪುನರ್‌ ಮನನ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. 

ಜೂನ್‌ 21ರಿಂದ ಜುಲೈ 5ರವರೆಗೆ  ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ. ಪ್ರೌಢ ಶಾಲೆಗಳ 8, 9, 10ನೇ ವಿದ್ಯಾರ್ಥಿಗಳಿಗೆ ಜೂನ್‌ 15ರಿಂದ 2021–22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ. 

ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆಯೇ ತಿಳಿಸಿದಂತೆ ಏ. 27ರಿಂದ ಜೂನ್‌ 14ರವರೆಗೆ ಬೇಸಿಗೆ ರಜೆ ನೀಡಲಾಗಿದೆ. ಜೂನ್‌ 15ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಆದರೆ, ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ಬೇಸಿಗೆ ರಜೆ ನೀಡಲಾಗಿದೆ.

ಬೇಸಿಗೆ ರಜೆ ಅವಧಿಯಲ್ಲಿ‌ ಪ್ರೌಢಶಾಲೆಗಳ ಶಿಕ್ಷಕರು ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಅನ್ಬು ಕುಮಾರ್ ತಿಳಿಸಿದ್ದಾರೆ.

ಕೋವಿಡ್ ಹೆಚ್ಚುತ್ತಿರುವ ಕಾರಣ ರಾಜ್ಯದಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ‌ ಸಂದರ್ಭವನ್ನು ಗಮನದಲ್ಲಿರಿಸಿ 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಪರಿಷ್ಕರಿಸಲಾಗಿದೆ.

SCROLL FOR NEXT