ರಾಜ್ಯ

ಬೆಡ್ ದಂಧೆ: ಸಿಸಿಬಿ ಪೊಲೀಸರಿಂದ ಕೋವಿಡ್ ವಾರ್ ರೂಮ್ ನಲ್ಲಿ ಮಾಹಿತಿ ಸಂಗ್ರಹಣೆ

Manjula VN

ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೆತ್ತಿಕೊಂಡಿರುವ ಕೇಂದ್ರೀಯ ಅಪರಾಧ ವಿಭಾಗದ ಪೊಲೀಸರು 8 ವಲಯದಲ್ಲಿರುವ ಬಿಬಿಎಂಪಿ ವಾರ್ ರೂಮ್ ನಿಂದ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆಂದು ತಿಳಿದುಬಂದಿದೆ. 

ಈ ಕುರಿತು ಅಪರಾಧ ವಿಭಾಗ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಮಾಹಿತಿ ನೀಡಿದ್ದು, ಬುಧವಾರ ಪೊಲೀಸರು 8 ವಲಯಗಳಲ್ಲಿರುವ ಕೋವಿಡ್ ವಾರ್ ರೂಮ್ ಗಳಲ್ಲಿ ಪರಿಶೀಲನೆ ನಡೆಸಿದೆ. ಪರಿಶೀಲನೆ ವೇಳೆ ಸಾಕಷ್ಟು ಮಾಹಿತಿಗಳನ್ನು ಸಂಗ್ರಹಿಸಿದ್ದೇವೆ. ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ 8 ತಂಡ 8 ವಲಯಗಳಲ್ಲಿ ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದೆ. ನಮಗೆ ಲಭ್ಯವಾಗಿರುವ ಮಾಹಿತಿಯನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 

ಈ ನಡುವೆ ಬೊಮ್ಮನಹಳ್ಳಿಯಲ್ಲಿರುವ ವಾರ್ ರೂಮ್ ನಲ್ಲಿ ನಾಲ್ವರು ಆರೋರಿಗಳನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. 

ವಿಚಾರಣೆ ವೇಳೆ ಆರೋಪಿಗಳು ಮಾಹಿತಿ ನೀಡಿರುವ ಮಾಹಿತಿಯನ್ನು ಆಧರಿಸಿ ನಮ್ಮ ತಂಡ ಆಸ್ಪತ್ರೆಗಳಲ್ಲಿ ಪರಿಶೀಲನೆ ನಡೆಸುತ್ತಿದೆ. ವಿಚಾರಣೆ ಪೂರ್ಣಗೊಂಡ ಬಳಿಕ ಅವರನ್ನು ವಶಕ್ಕೆ ಪಡೆಯಲಾಗುತ್ತದೆ ಎಂದು ಸಂದೀಪ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ. 

ಕೆಲ ಖಾಸಗಿ ಆಸ್ಪತ್ರೆಗಳೂ ಈ ಆರೋಪಿಗಳೊಂದಿಗೆ ಕೈಜೋಡಿಸಿರುವುದು ವಿಚಾರಣೆಯಿಂದ ತಿಳಿದುಬಂದಿದೆ. ಈ ಮೊದಲು ಬಂಧನಕ್ಕೊಳಗಾಗಿದ್ದ ನೇತ್ರಾವತಿ ಹಾಗೂ ರೋಹಿತ್ ಎಂಬುವವರು ಕೆಲ ವಿಚಾರಣಗಳನ್ನು ಬಾಯ್ಬಿಟ್ಟಿದ್ದು, ವಾರ್ ರೂಮ್ ನಲ್ಲಿ ಕೆಲಸ ಮಾಡುತ್ತಿರುವ ಕೆಲವರು ಬೆಡ್ ಬ್ಲಾಕ್ ಮಾಡಲು ಶೇ.10 ರಷ್ಟು ಕಮಿಷನ್ ಪಡೆಯುತ್ತಿದ್ದರು ಎಂದು ಹೇಳಿದ್ದಾರೆಂದೂ ಮೂಲಗಳು ಮಾಹಿತಿ ನೀಡಿವೆ. 

SCROLL FOR NEXT