ರಾಜ್ಯ

ಬೆಳಗಾವಿ ಸುವರ್ಣ ಸೌಧವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿ: ಸರ್ಕಾರಕ್ಕೆ ಶಾಸಕಿ ಅಂಜಲಿ ನಿಂಬಾಳಕರ್ ಪತ್ರ

Sumana Upadhyaya

ಬೆಳಗಾವಿ: ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಬೆಳಗಾವಿಯ ಸುವರ್ಣ ಸೌಧವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಬಳಕೆ ಮಾಡಿಕೊಳ್ಳುವಂತೆ ಕಾಂಗ್ರೆಸ್ ನ ಬೆಳಗಾವಿ ಖಾನಾಪುರ ಕ್ಷೇತ್ರದ ಶಾಸಕಿ ಡಾ ಅಂಜಲಿ ಹೇಮಂತ್ ನಿಂಬಾಳಕರ್ ಸರ್ಕಾರವನ್ನು ಒತ್ತಾಯಿಸಿ ಪತ್ರ ಬರೆದಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲೂ ಕೊರೋನಾ ರಣಕೇಕೆ ಹಾಕುತ್ತಿದ್ದು, ದಿನದ ಸೋಂಕಿತರ ಸಂಖ್ಯೆ ಸಾವಿರ ಸಮೀಪಕಕೆ ಬಂದಿದೆ. ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆಯುಂಟಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕಳೆದ ಎರಡು ವರ್ಷಗಳಿಂದ ಯಾವುದೇ ಅಧಿವೇಶನಗಳನ್ನು ನಡೆಸದೆ ವ್ಯರ್ಥವಾಗಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ನಿರ್ವಹಣೆ ಮಾಡಲಾಗುತ್ತಿರುವ ಸುವರ್ಣಸೌಧವನ್ನು ಸದ್ಭಳಕೆ ಮಾಡಿಕೊಳ್ಳುವುದು ಸೂಕ್ತ ಎಂದು ಪತ್ರದಲ್ಲಿ ನಿಂಬಾಳಕರ್ ಹೇಳಿದ್ದಾರೆ.

ಸಾವಿರಾರು ರೋಗಿಗಳಿಗೆ ಏಕಕಾಲದಲ್ಲಿ ಚಿಕಿತ್ಸೆ ನೀಡುವಷ್ಟು ವಿಶಾಲವಾಗಿರುವ ಸುವರ್ಣಸೌಧದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ಸಲಕರಣೆಗಳನ್ನು ಅಳವಡಿಸಿ, ಅಗತ್ಯ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಿ ಉತ್ತರ ಕರ್ನಾಟಕ ಭಾಗದ ಮಂದಿಗೆ ವ್ಯವಸ್ಥೆ ಮಾಡಿಕೊಡಬೇಕೆಂದು ಸರ್ಕಾರವನ್ನು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

SCROLL FOR NEXT