ಕೋವಿಡ್-19 ಸೋಂಕು ಅಬ್ಬರ 
ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಇಂದು ದಾಖಲೆಯ 592 ಮಂದಿ ಸಾವು, 48,781 ಹೊಸ ಸೋಂಕು ಪ್ರಕರಣ ದಾಖಲು!

ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿನ ಮರಣ ಮೃದಂಗ ಮುಂದುವರೆದಿದ್ದು, ಬೆಂಗಳೂರಿನಲ್ಲಿ 346 ಸೇರಿದಂತೆ ರಾಜ್ಯಾದ್ಯಂತ ಮಹಾಮಾರಿಗೆ ಶುಕ್ರವಾರ ಒಂದೇ ದಿನ ದಾಖಲೆಯ 592 ಮಂದಿ ಬಲಿಯಾಗಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿನ ಮರಣ ಮೃದಂಗ ಮುಂದುವರೆದಿದ್ದು, ಬೆಂಗಳೂರಿನಲ್ಲಿ 346 ಸೇರಿದಂತೆ ರಾಜ್ಯಾದ್ಯಂತ ಮಹಾಮಾರಿಗೆ ಶುಕ್ರವಾರ ಒಂದೇ ದಿನ ದಾಖಲೆಯ 592 ಮಂದಿ ಬಲಿಯಾಗಿದ್ದಾರೆ. 

ಹೌದು.. ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ರಾಜ್ಯಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 48,781 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, 592 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 48,781 ಹೊಸ ಸೋಂಕು ಪ್ರಕರಣಗಳು  ವರದಿಯಾಗಿದ್ದು, ಆ ಮೂಲಕ ಕರ್ನಾಟಕದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 18,38,885ಕ್ಕೆ ಏರಿಕೆಯಾಗಿದೆ. 

ಅಂತೆಯೇ ರಾಜ್ಯದಲ್ಲಿ ಇಂದು ದಾಖಲೆಯ 592 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ರಾಜ್ಯದಲ್ಲಿ 17, 804ಕ್ಕೆ ಏರಿಕೆಯಾಗಿದೆ. ಇನ್ನು 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 28, 623 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ  ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 12,84,420ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 53,6,641ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 21376 ಹೊಸ ಸೋಂಕು ಪ್ರಕರಣ ದಾಖಲು
ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ 21376 ಹೊಸ ಸೋಂಕು ಪ್ರಕರಣಗಳು ದಾಖಲಾಗಿದೆ. ಆ ಮೂಲಕ ಸಿಲಿಕಾನ್ ಸಿಟಿಯಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 908462ಕ್ಕೆ ಏರಿಕೆಯಾಗಿದೆ. ಈ ಪೈಕಿ ಇಂದು 11784 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಬೆಂಗಳೂರಿನಲ್ಲಿ  ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 558992ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಅತೀ ಹೆಚ್ಚು ಅಂದರೆ 346 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ನಗರದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 7491ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್