ಬೆಂಗಳೂರು: ರಾಜ್ಯದಲ್ಲಿ ಲಭವಿರುವ ಕೋವಿಶೀಲ್ಡ್ ಲಸಿಕೆಯಲ್ಲಿ ಶೇ.70 ರಷ್ಟು ಲಸಿಕೆಯನ್ನು 2ನೇ ಡೋಸ್ ಹಾಕಿಸಿಕೊಳ್ಳಲು ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಶನಿವಾರ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ‘ಕೋವಿಶೀಲ್ಡ್ ಲಸಿಕೆಯಲ್ಲಿ ಶೇ.30 ರಷ್ಟನ್ನು 45 ವರ್ಷ ಮೇಲ್ಪಟ್ಟವರಿಗೆ 1ನೇ ಡೋಸ್ ನೀಡಲು ಬಳಸಲಾಗುತ್ತದೆ’ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಲಭ್ಯವಿರುವ ಕೋವಿಶೀಲ್ಡ್ ಲಸಿಕೆಯಲ್ಲಿ 70%ರಷ್ಟನ್ನು 2ನೇ ಡೋಸ್ ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು. ಉಳಿದ 30% ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರಿಗೆ 1ನೇ ಡೋಸ್ ನೀಡಲು ಬಳಸಲಾಗುವುದು. ಕೋವ್ಯಾಕ್ಸಿನ್ ಲಸಿಕೆಯನ್ನು 2ನೇ ಡೋಸ್ ಬಾಕಿ ಇರುವ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ.