ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಇಂದು 482 ಮಂದಿ ಸಾವು, 47,563 ಹೊಸ ಸೋಂಕು ಪ್ರಕರಣ ದಾಖಲು!

Srinivas Rao BV

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿನ ಮರಣ ಮೃದಂಗ ಮುಂದುವರೆದಿದ್ದು, ಬೆಂಗಳೂರು ನಗರದಲ್ಲಿ 21534 ಸೇರಿದಂತೆ ರಾಜ್ಯಾದ್ಯಂತ ಮಹಾಮಾರಿಗೆ ಶನಿವಾರ ಒಂದೇ ದಿನ 482 ಮಂದಿ ಬಲಿಯಾಗಿದ್ದಾರೆ. 

ಹೌದು.. ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ರಾಜ್ಯಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 47,563 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, 482 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳ ಈ ಮೂಲಕ ಕರ್ನಾಟಕದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 18,86,448ಕ್ಕೆ ಏರಿಕೆಯಾಗಿದೆ. 

ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ರಾಜ್ಯದಲ್ಲಿ 18,286ಕ್ಕೆ ಏರಿಕೆಯಾಗಿದೆ. ಇನ್ನು 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 34,881 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 13,19,301ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 54,8,841ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರದಲ್ಲಿ 21,534 ಹೊಸ ಸೋಂಕು ಪ್ರಕರಣ ದಾಖಲು

ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ 21,534 ಹೊಸ ಸೋಂಕು ಪ್ರಕರಣಗಳು ದಾಖಲಾಗಿದೆ. ಆ ಮೂಲಕ ಸಿಲಿಕಾನ್ ಸಿಟಿಯಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 929996 ಕ್ಕೆ ಏರಿಕೆಯಾಗಿದೆ. ಈ ಪೈಕಿ ಇಂದು 18,473 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಬೆಂಗಳೂರಿನಲ್ಲಿ  ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 577465ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಅತೀ ಹೆಚ್ಚು ಅಂದರೆ 285 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ನಗರದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 7776ಕ್ಕೆ ಏರಿಕೆಯಾಗಿದೆ.

SCROLL FOR NEXT