ಸಾಂದರ್ಭಿಕ ಚಿತ್ರ 
ರಾಜ್ಯ

ನಾಳೆ ಬೆಳಗ್ಗೆಯಿಂದ 14 ದಿನ ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್: 10 ಗಂಟೆ ನಂತರ ಅಡ್ಡಾಡಿದರೆ ಬೀಳುತ್ತೆ ಲಾಠಿ ಏಟು 

ಕೊರೋನಾ ಸೋಂಕಿನ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕಳೆದ ತಿಂಗಳಾಂತ್ಯದಲ್ಲಿ ಹೇರಿದ್ದ ಜನತಾ ಕರ್ಫ್ಯೂ ಫಲ ಕೊಟ್ಟಿಲ್ಲ, ಸೋಂಕಿತರು, ಮೃತಪಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ.

ಬೆಂಗಳೂರು: ಕೊರೋನಾ ಸೋಂಕಿನ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕಳೆದ ತಿಂಗಳಾಂತ್ಯದಲ್ಲಿ ಹೇರಿದ್ದ ಜನತಾ ಕರ್ಫ್ಯೂ ಫಲ ಕೊಟ್ಟಿಲ್ಲ, ಸೋಂಕಿತರು, ಮೃತಪಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ.

ಈ ಹಿನ್ನೆಲೆಯಲ್ಲಿ ನಾಳೆಯಿಂದ ಮೇ 24ರವರೆಗೆ ಸಂಪೂರ್ಣ ಲಾಕ್ ಡೌನ್ ನ್ನು ಸರ್ಕಾರ ಘೋಷಿಸಿದೆ. ಸಾಮಾನು ತರಲೆಂದು, ಅವರಿವರನ್ನು ಕಾಣಲೆಂದು ಪ್ರತಿದಿನ ಬೆಳಿಗ್ಗೆ 10 ಗಂಟೆ ನಂತರ ಸುಖಾಸುಮ್ಮನೆ ರಸ್ತೆಗಿಳಿದರೆ ಪೊಲೀಸರಿಂದ ಲಾಠಿ ಏಟಿನ ರುಚಿ ತಿನ್ನಬೇಕಾಗಬಹುದು.

ನಾಳೆ ಬೆಳಿಗ್ಗೆ 6 ಗಂಟೆಯಿಂದಲೇ ಕಠಿಣ ನಿಯಮ ಜಾರಿ: ನಾಳೆ ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ಸಾರ್ವಜನಿಕರು ತಮಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸಲು ಹತ್ತಿರದ ಅಂಗಡಿಗಳಿಗೆ ಹೋಗಬಹುದು, ನಂತರ ಜನರ, ವಾಹನ ಓಡಾಟಕ್ಕೆ ಸಂಪೂರ್ಣ ಲಾಕ್ ಡೌನ್ ಬೀಳಲಿದೆ. ಅಂತರ ಜಿಲ್ಲೆ, ಅಂತರ ರಾಜ್ಯ ಸಂಚಾರ ಎಲ್ಲವೂ ಬಂದ್. ಯಾರಾದರೂ ಕುಂಟುನೆಪ ಒಡ್ಡಿ  ಅನಗತ್ಯವಾಗಿ ಮನೆಯಿಂದ ಆಚೆ ಬಂದರೆ, ವಾಹನವನ್ನು ರಸ್ತೆಗಿಳಿಸಿದರೆ ಪೊಲೀಸರಿಂದ ತಕ್ಕ ಶಿಕ್ಷೆ ಎದುರಿಸಬೇಕಾಗುವುದು ಖಂಡಿತ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಜನರು ಹೊರಗೆ ಓಡಾಡುವುದು ಹೆಚ್ಚು, ಜನಸಂಖ್ಯೆಯೂ ಇಲ್ಲಿ ಹೆಚ್ಚಿರುವುದರಿಂದ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದನ್ನು, ಜನರನ್ನು ನಿಯಂತ್ರಿಸುವುದು ಪೊಲೀಸರಿಗೆ ಹರಸಾಹಸವಾಗುತ್ತದೆ. 
ಈ ಸಮಯದಲ್ಲಿ ನಾಳೆಯಿಂದ ಜಾರಿಯಾಗುವ ಲಾಕ್ ಡೌನ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಎಲ್ಲರೂ ಪಾಲಿಸಿ, ಎಲ್ಲರೂ ಸಹಕರಿಸಿ, ಲಾಕ್ ಡೌನ್ ಉಲ್ಲಂಘಿಸಿದ್ದು ಕಂಡು ಬಂದರೆ, ಅನಗತ್ಯವಾಗಿ ಹೊರಗೆ ಓಡಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

ದಕ್ಷಿಣ ಕನ್ನಡ ಜಿಲ್ಲೆಗೆ 'ಮಂಗಳೂರು ಜಿಲ್ಲೆ' ಎಂದು ಮರುನಾಮಕರಣದ ಪ್ರಸ್ತಾವನೆ: ಸಾರ್ವಜನಿಕರಿಂದ ಆಕ್ಷೇಪಣೆಗೆ ಆಹ್ವಾನ

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video