ಸಚಿವ ಅರವಿಂದ ಲಿಂಬಾವಳಿ 
ರಾಜ್ಯ

ಕೋವಿಡ್ ನಿರ್ವಹಣೆಗಾಗಿ ವಾರ್ಡ್ ಮಟ್ಟದಲ್ಲಿ ತುರ್ತು ಸ್ಪಂದನಾ ಸಮಿತಿ ರಚನೆ- ಲಿಂಬಾವಳಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್‌ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಮುಂಬೈ ಹಾಗೂ ಚೆನ್ನೈ ಮಾದರಿಯಲ್ಲಿಯೇ ಕೋವಿಡ್ ನಿರ್ವಹಣೆಗಾಗಿ ವಾರ್ಡ್ ಮಟ್ಟದಲ್ಲಿ ತುರ್ತು ಸ್ಪಂದನಾ ಸಮಿತಿ ರಚಿಸಲಾಗುವುದು ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. 

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್‌ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಮುಂಬೈ ಹಾಗೂ ಚೆನ್ನೈ ಮಾದರಿಯಲ್ಲಿಯೇ ಕೋವಿಡ್ ನಿರ್ವಹಣೆಗಾಗಿ ವಾರ್ಡ್ ಮಟ್ಟದಲ್ಲಿ ತುರ್ತು ಸ್ಪಂದನಾ ಸಮಿತಿ ರಚಿಸಲಾಗುವುದು ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. 

ಈ ಸಂಬಂಧ ಭಾನುವಾರ ಅಧಿಕಾರಿಗಳೊಂದಿಗೆ ವರ್ಚ್ಯುವಲ್‌ ಸಭೆ ನಡೆಸಿದ ಲಿಂಬಾವಳಿ, ಕೋವಿಡ್ ಸೋಂಕನ್ನು ವಾರ್ಡ್ ಮಟ್ಟದಲ್ಲೇ ಪರಿಣಾಮಕಾರಿಯಾಗಿ ತಡೆಯುವ ನಿಟ್ಟಿನಲ್ಲಿ ಈ ಸಮಿತಿ ರಚಿಸಲು ಸರ್ಕಾರ ಆದೇಶ ಹೊರಡಿಸಿದೆ.ಬಿಬಿಎಂಪಿಯ ವಾರ್ಡ್ ಮಟ್ಟದಲ್ಲಿ ಕೋವಿಡ್ ನಿರ್ವಹಣೆ ದೃಷ್ಟಿಯಿಂದ ಇದು ಸಹಕಾರಿಯಾಗಲಿದೆ ಎಂದರು. 

ನಗರದಲ್ಲಿ ಕೋವಿಡ್ ಪಾಸಿಟಿವ್ ಬಂದವರು ನೇರವಾಗಿ ಆಸ್ಪತ್ರೆಯಲ್ಲಿ  ಹಾಸಿಗೆ ಬೇಕು ಎನ್ನುತ್ತಿದ್ದಾರೆ. ಆದರೆ ಎಲ್ಲರೂ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುವ ಅವಶ್ಯಕತೆಯಿಲ್ಲ. ಮನೆಯಲ್ಲಿ ವ್ಯವಸ್ಥೆ ಇಲ್ಲದವರು ಕೋವಿಡ್ ಆರೈಕೆ ಕೇಂದ್ರ ಅಥವಾ ಸ್ಥಿರೀಕರಣ ಕೇಂದ್ರಗಳಲ್ಲಿ ಹೋಗಿ ಆರೈಕೆ ಪಡೆಯಬಹುದು. ಇದರ ಜೊತೆ ವಾರ್ಡ್ ಮಟ್ಟದಲ್ಲಿ ಕೂಡಲೆ ಟ್ರಯಾಜಿಂಗ್ ಸೆಂಟರ್ ಮಾಡಿ, ಐಸೋಲೇಷನ್ ಇರುವವರಿಗೆ  ಸರಿಯಾದ ಉಪಚಾರ ಮಾಡಿದಾದ ಸಮಸ್ಯೆ ನಿವಾರಣೆಯಾಗಲಿದೆ ಎಂದರು.

ಬಿಬಿಎಂಪಿ ಮುಖ್ಯ ಆಯುಕ್ತರು  ಗೌರವ್ ಗುಪ್ತ ಮಾತನಾಡಿ, ಸದ್ಯ ನಗರದಲ್ಲಿ ಪ್ರತಿನಿತ್ಯ ಸುಮಾರು 20,000 ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡುಬರುತ್ತಿವೆ. ಈ ನಿಟ್ಟಿನಲ್ಲಿ ವಲಯಗಳ ವಾರ್ ರೂಂ ಸದೃಢಗೊಳಿಸುವ ನಿಟ್ಟಿನಲ್ಲಿ ವಾರ್ ರೂಂ ವಿಕೇಂದ್ರಿಕರಣ ಮಾಡಿದಾಗ ನಾಗರಿಕರಿಗೆ ತ್ವರಿತವಾಗಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯ. ಜೊತೆಗೆ ಪರಿಣಾಮಕಾರಿಯಾಗಿ ಕೋವಿಡ್ ತಡೆಯಲು ಸಾಧ್ಯವಾಗುತ್ತದೆ ಎಂದರು.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್  ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ  ಕೋವಿಡ್ ನಿಯಂತ್ರಿಸುವ ಸಲುವಾಗಿ ಎಲ್ಲಾ 198 ವಾರ್ಡ್ ಗಳಲ್ಲಿ ಸಮಿತಿಯನ್ನು ರಚಿಸಿಕೊಂಡು ಆಯಾ ವಾರ್ಡ್ ಗಳಲ್ಲಿ ಅಧಿಕಾರಿಗಳು,  ಸಂಘ-ಸಂಸ್ಥೆಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ಸ್ವಯಂಸೇವಕರ ಸಹಯೋಗದಲ್ಲಿ ವಾರ್ಡ್ ಕಂಟ್ರೋಲ್ ರೂಂ, ಟ್ರಯಾಜ್ ಸೆಂಟರ್, ಸಣ್ಣ ಸಣ್ಣ ಕೋವಿಡ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಿ ಸ್ಥಳೀಯರಿಗೆ ತ್ವರಿತವಾಗಿ ಸ್ಪಂದಿಸುವ ಮೂಲಕ ಕೋವಿಡ್  ನಿಯಂತ್ರಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಆಯಾ ವಾರ್ಡ್ ಗಳಲ್ಲಿ ಎನ್‌ಜಿಒ,ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ಸ್ವಯಂಸೇವಕರು, ವೈದ್ಯರು, ಬೂತ್ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳ ಪಟ್ಟಿ ಹಾಗೂ ಸಣ್ಣ-ಸಣ್ಣ ಆಸ್ಪತ್ರೆ, ಡೆಂಟಲ್ ಕಾಲೇಜುಗಳ ಪಟ್ಟಿಯನ್ನು ಕೂಡಲೆ ಸಿದ್ದಪಡಿಸಿಕೊಂಡು ಪ್ರತ್ಯೇಕ ತಂಡಗಳನ್ನಾಗಿ ಮಾಡಿಕೊಂಡು ಒಂದೊಂದು ತಂಡಕ್ಕೆ ಒಂದೊಂದು ಜವಾಬ್ದಾರಿ ನೀಡಿ ಕೋವಿಡ್  ನಿಯಂತ್ರಿಸಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT