ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಇಂದು 47,930 ಹೊಸ ಪ್ರಕರಣ, 490 ಮಂದಿ ಸಾವು

Srinivas Rao BV

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಹರಡುವಿಕೆಯ ತೀವ್ರತೆ ಮುಂದುವರೆದಿದ್ದು, ಬೆಂಗಳೂರು ನಗರದಲ್ಲಿ 281 ಸೇರಿದಂತೆ ರಾಜ್ಯಾದ್ಯಂತ ಮಹಾಮಾರಿಗೆ ಭಾನುವಾರ ಒಂದೇ ದಿನ 490 ಮಂದಿ ಬಲಿಯಾಗಿದ್ದಾರೆ. 

ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ರಾಜ್ಯಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 47,930  ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, 490 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳ ಈ ಮೂಲಕ ಕರ್ನಾಟಕದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 19,34,378ಕ್ಕೆ ಏರಿಕೆಯಾಗಿದೆ. 

ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ರಾಜ್ಯದಲ್ಲಿ 18,776ಕ್ಕೆ ಏರಿಕೆಯಾಗಿದೆ. ಇನ್ನು 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 31,796 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 13,51,097ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 56,4,485ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರದಲ್ಲಿ 20,897ಹೊಸ ಸೋಂಕು ಪ್ರಕರಣ ದಾಖಲು

ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ 20,897 ಹೊಸ ಸೋಂಕು ಪ್ರಕರಣಗಳು ದಾಖಲಾಗಿದೆ. ಆ ಮೂಲಕ ಸಿಲಿಕಾನ್ ಸಿಟಿಯಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 950893 ಕ್ಕೆ ಏರಿಕೆಯಾಗಿದೆ. ಈ ಪೈಕಿ ಇಂದು 15,000ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಬೆಂಗಳೂರಿನಲ್ಲಿ  ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 592465ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 281 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ನಗರದಲ್ಲಿ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 8,057ಕ್ಕೆ ಏರಿಕೆಯಾಗಿದೆ.

SCROLL FOR NEXT