ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ 
ರಾಜ್ಯ

ಆಕ್ಸಿಜನ್ ಬೆಡ್ ಪ್ರಮಾಣ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ: ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್

ಸುಪ್ರೀಂ ಕೋರ್ಟ್ 1,200 ಮೆ.ಟನ್‌ ಆಮ್ಲಜನಕವನ್ನು ರಾಜ್ಯಕ್ಕೆ ಹಂಚಿಕೆ ಮಾಡಲು ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸರ್ಕಾರ ಆಕ್ಸಿಜನ್‌ ಬೆಡ್‌ಗಳ ಪ್ರಮಾಣವನ್ನು ಇನ್ನೂ 20,000 ಕ್ಕೆ ಹೆಚ್ಚಿಸಲು ಮುಂದಾಗಿದೆ ಎಂದು ಕೋವಿಡ್‌ ಕಾರ್ಯಪಡೆ ಅಧ್ಯಕ್ಷ, ಉಪಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ್ ಅವರು ಶನಿವಾರ ಹೇಳಿದ್ದಾರೆ.

ಬೆಂಗಳೂರು: ಸುಪ್ರೀಂ ಕೋರ್ಟ್ 1,200 ಮೆ.ಟನ್‌ ಆಮ್ಲಜನಕವನ್ನು ರಾಜ್ಯಕ್ಕೆ ಹಂಚಿಕೆ ಮಾಡಲು ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸರ್ಕಾರ ಆಕ್ಸಿಜನ್‌ ಬೆಡ್‌ಗಳ ಪ್ರಮಾಣವನ್ನು ಇನ್ನೂ 20,000 ಕ್ಕೆ ಹೆಚ್ಚಿಸಲು ಮುಂದಾಗಿದೆ ಎಂದು ಕೋವಿಡ್‌ ಕಾರ್ಯಪಡೆ ಅಧ್ಯಕ್ಷ, ಉಪಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ್ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟು 20,000 ಆಕ್ಸಿಜನ್‌ ಬೆಡ್‌ಗಳ ಪೈಕಿ ತಕ್ಷಣವೇ ತುರ್ತಾಗಿ 10,000 ಬೆಡ್‌ ವ್ಯವಸ್ಥೆ ಮಾಡಲಾಗುವುದು. ಇದರೊಂದಿಗೆ ರಾಜ್ಯದಲ್ಲಿ ಉಂಟಾಗಿರುವ ಆಕ್ಸಿಜನ್‌ ಬೆಡ್‌ಗಳ ಹಾಹಾಕಾರ ನೀಗಲಿದೆ ಎಂದು ಹೇಳಿದ್ದಾರೆ. 

ಕೋವಿಡ್‌ ಬರುವ ಮುನ್ನ ರಾಜ್ಯದಲ್ಲಿ ದಿನಕ್ಕೆ 100 ಮೆಟ್ರಿಕ್ ಟನ್‌ ಆಕ್ಸಿಜನ್‌ ಮಾತ್ರ ಖರ್ಚಾಗುತ್ತಿತ್ತು. ಆದರೆ, ಈಗ ನಿತ್ಯವೂ 950 ಮೆ.ಟನ್‌ ಬೇಕಾಗುತ್ತಿದೆ. ಸದ್ಯಕ್ಕಿರುವ ಆಕ್ಸಿಜನ್‌ ಬೆಡ್‌ಗಳಿಗೆ ಸಾಕಾಗುವಷ್ಟು ಆಮ್ಲಜನಕ ನಮ್ಮಲ್ಲಿದೆ. ಆದರೆ, ಸೋಂಕಿತರು ಹೆಚ್ಚುತ್ತಿರುವುದರಿಂದ ಅನಿವಾರ್ಯವಾಗಿ ಬೆಡ್‌ಗಳನ್ನೂ ಹೆಚ್ಚಿಸಬೇಕಾಗಿರುವುದರಿಂದ ಹೆಚ್ಚುವರಿ ಆಮ್ಲಜನಕವೂ ಬೇಕಿದೆ. ಆ ಕೊರತೆ ನ್ಯಾಯಾಲಯದ ಆದೇಶದಿಂದ ನೀಗಲಿದೆ ಎಂದು ತಿಳಿಸಿದರು.

ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲೂ ಆಕ್ಸಿಜನ್‌ ಬೆಡ್‌ ಹಾಕಲು ನಿರ್ಧರಿಸಲಾಗಿದೆ. ಅಲ್ಲಿಗೆ ಅಗತ್ಯ ನುರಿತ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದ ಅವರು, ಸದ್ಯಕ್ಕೆ ಈಗ ರಾಜ್ಯದಲ್ಲಿ 70,000 ಬೆಡ್‌ಗಳನ್ನು ಕೋವಿಡ್‌ಗೆ ಮೀಸಲಾಗಿ ಇಡಲಾಗಿದ್ದು, ಈ ಪೈಕಿ ಸರಕಾರದಿಂದ 35,000 ಹಾಗೂ ಖಾಸಗಿ ಆಸ್ಪತ್ರೆಗಳ ವತಿಯಿಂದ 35,000 ಬೆಡ್‌ಗಳಿವೆ. ಈ ಒಟ್ಟು ಬೆಡ್‌ಗಳ ಪೈಕಿ 50,000 ಆಕ್ಸಿಜನ್‌ ಬೆಡ್‌ಗಳಿವೆ ಎಂದು ಹೇಳಿದರು.

ಕೋವಿಡ್‌ ರಿಸಲ್ಟ್‌ ತಡವಾದರೆ ಲ್ಯಾಬ್‌ಗೆ ದಂಡ...!
ಇನ್ನು ಮುಂದೆ 24 ಗಂಟೆ ಒಳಗಾಗಿ ಕೋವಿಡ್‌ ಪರೀಕ್ಷೆ ರಿಸಲ್ಟ್‌ ನೀಡಲಾಗುವುದು. ಯಾವ ಲ್ಯಾಬೇ ಆಗಿರಲಿ. ಅದು ಖಾಸಗಿಯಾಗಿರಲಿ ಅಥವಾ ಸರಕಾರದ್ದೇ ಆಗಿರಲಿ ಸರ್ಕಾರ ನಿಗದಿ ಮಾಡಿದ ಸಮಯದೊಳಗೆ ಫಲಿತಾಂಶ ನೀಡದಿದ್ದರೆ ದಂಡ ವಿಧಿಸಲಾಗುವುದು ಎಂದು ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ. 

ಇಷ್ಟು ದಿನ ಸೋಂಕಿತರು ತಡವಾಗಿ ಪರೀಕ್ಷೆಗೆ ಬರುತ್ತಿದ್ದರು. ತಡವಾಗಿ ಪರೀಕ್ಷೆ ಮಾಡಿಸಿಕೊಂಡು ತಡವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಹೀಗಾಗಿ ಪ್ರಾಣ ಹಾನಿ ಹೆಚ್ಚಾಗುತ್ತಿತ್ತು. ಮುಂದೆ ಹೀಗೆ ಆಗಬಾರದು. ಆರ್‌ಟಿಪಿಸಿಆರ್‌ ಟೆಸ್ಟ್‌ಗೆ ವೇಗ ಕೊಡಲಾಗಿದೆ. ಕೋವಿಡ್‌ ಬಂದಾಗ ಸರ್ಕಾರಿ ವಲಯದಲ್ಲಿ ಕೇವಲ ಒಂದೇ ಲ್ಯಾಬ್‌ ಇತ್ತು. ಇವತ್ತು 91 ಲ್ಯಾಬ್‌ಗಳಿವೆ. ಖಾಸಗಿ ವಲಯದಲ್ಲಿ 150 ಲ್ಯಾಬ್‌ಗಳಿವೆ. ದಿನಕ್ಕೆ ಸರಕಾರದ ವತಿಯಿಂದ 10,500 ಟೆಸ್ಟ್‌ಗಳನ್ನು ಮಾಡಬಹುದು. 

ಖಾಸಗಿ ಲ್ಯಾಬ್‌ಗಳಲ್ಲಿ 70,000 ಜನರಿಗೆ ಟೆಸ್ಟ್‌ ಆಗುತ್ತಿದೆ. ಅಂಕಿ-ಅಂಶಗಳ ಪ್ರಕಾರ ಶೇ.93 ಆರ್‌ಟಿಪಿಸಿಆರ್‌ ಟೆಸ್ಟ್‌ ಆಗುತ್ತಿದ್ದರೆ, ಶೇ.7 ಮಾತ್ರ ರಾಟ್‌ ಟೆಸ್ಟ್‌ ಆಗುತ್ತಿದೆ. ಈಗ ರಾಟ್‌ ಟೆಸ್ಟ್‌ ಅನ್ನು ಎಷ್ಟು ಬೇಕಾದರೂ ಮಾಡಲು ಐಸಿಎಂಆರ್‌ ಒಪ್ಪಿಗೆ ಕೊಟ್ಟಿದ್ದು, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಕಿಟ್‌ಗಳನ್ನು ಒದಗಿಸಿ ಪರೀಕ್ಷೆಗಳನ್ನು ಹೆಚ್ಚಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT