ಸಂಗ್ರಹ ಚಿತ್ರ 
ರಾಜ್ಯ

ಶಿವಮೊಗ್ಗ: ವೆಂಟಿಲೇಟರ್ ಸಿಗದೆ ನರಳಾಡಿ ಸೋಂಕಿತ ವ್ಯಕ್ತಿ ದಾರುಣ ಸಾವು

ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬರಿಗೆ ಸೂಕ್ತ ಸಮಯಕ್ಕೆ ವೆಂಟಿಲೇಟರ್ ಸಿಗದೇ ಆಸ್ಪತ್ರೆ ವಾರ್ಡಿನಲ್ಲಿ 2 ಗಂಟೆಗಳ ಕಾಲ ತೀವ್ರ ನರಳಾಡಿ ಕೊನೆಯುಸಿರೆಳೆದ ದಾರುಣ ಘಟನೆ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. 

ಶಿವಮೊಗ್ಗ: ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬರಿಗೆ ಸೂಕ್ತ ಸಮಯಕ್ಕೆ ವೆಂಟಿಲೇಟರ್ ಸಿಗದೇ ಆಸ್ಪತ್ರೆ ವಾರ್ಡಿನಲ್ಲಿ 2 ಗಂಟೆಗಳ ಕಾಲ ತೀವ್ರ ನರಳಾಡಿ ಕೊನೆಯುಸಿರೆಳೆದ ದಾರುಣ ಘಟನೆ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. 

ಶಿಕಾರಿಪುರದ ಆನಂದ್ (46) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಆನಂದ್ ಅವರನ್ನು ಕುಟುಂಬಸ್ಥರು ಆ್ಯಂಬುಲೆನ್ಸ್ ನಲ್ಲಿ ಶಿಕಾರಿಪುರದಿಂದ ಮೆಗ್ಗಾನ್ ಆಸ್ಪತ್ರೆಗೆ ಕರೆತಂದಿದ್ದಾರೆ. 

ಅಷ್ಟರಲ್ಲಾಗಲೇ ಅವರ ಆಕ್ಸಿಜನ್ ಮಟ್ಟ ಶೇ.40ಕ್ಕೆ ಕುಸಿದಿತ್ತು. ಆದರೆ, ಆಸ್ಪತ್ರೆಯಲ್ಲಿ ಎಲ್ಲಾ ವೆಂಟಿಲೇಟರ್ ನಲ್ಲಿ ರೋಗಿಗಳು ಇದ್ದು, ಯಾವ ರೊಗಿಯನ್ನು ಇದರಿಂದ ಹೊರತರುವ ಸ್ಥಿತಿಯಲ್ಲಿ ವೈದ್ಯರು ಇರಲಿಲ್ಲ. ಹೀಗಾಗಿ ಕೂಡಲೇ ಜನರಲ್ ವಾರ್ಡಿನಲ್ಲೇ ರೋಗಿಗೆ ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗಿತ್ತು. 

ಆದರೆ, ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಈ ರೋಗಿ ಇದಕ್ಕೆ ಸ್ಪಂದಿಸಲಿಲ್ಲ. ರೋಗಿ ನರಳಾಡುತ್ತಿದ್ದರೂ ವೈದ್ಯರು ನರ್ಸ್ ಗಳು ಏನೂ ಮಾಡುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಪರಿಣಾಮ ಕೆಲ ಹೊತ್ತಿನಲ್ಲೇ ವ್ಯಕ್ತಿ ಸಾವನ್ನಪ್ಪಿದರು. 

ಶಿವಮೊಗ್ಗ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್'ನ ವೈದ್ಯಕೀಯ ಅಧೀಕ್ಷಕ, ಡಾ. ಶ್ರೀಧರ್ ಎಸ್ ಅವರು ಮಾತನಾಡಿ, ಆನಂದ್ ಅವರು ಆಸ್ಪತ್ರೆಗೆ ಬಂದಾಗ ಆಸ್ಪತ್ರೆಯಲ್ಲಿದ್ದ ಎಲ್ಲಾ ವೆಂಟಿಲೇಟರ್ ಗಳನ್ನು ಇತರೆ ರೋಗಿಗಳಿಗೆ ಅಳವಡಿಸಲಾಗಿತ್ತು. ವ್ಯಕ್ತಿಗೆ ಚಿಕಿತ್ಸೆ ನೀಡಲು ವೆಂಟಿಲೇಟರ್ ವ್ಯವಸ್ಥೆಗೆ ಪ್ರಯತ್ನಗಳನ್ನು ಮಾಡಲಾಗು್ತತಿತ್ತು. ಶಿಕಾರಿಪುರ ಆಸ್ಪತ್ರೆಯಿಂದ ಅವರನ್ನು ಕರೆತರಲಾಗಿತ್ತು. ನಮ್ಮ ಆಸ್ಪತ್ರೆಗೆ ಬರುವ ವೇಳೆಗೆ ಅವರ ಆಕ್ಸಿಜನ್ ಪ್ರಮಾಣ 40ಕ್ಕೆ ಇಳಿದಿತ್ತು. ಬಳಿಕ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದರು. ಸೋಂಕು ತೀವ್ರಗೊಂಡ ಆನಂದ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಿದ್ದಾರೆ. 

ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿಯವರು ಮಾತನಾಡಿ, ಜಿಲ್ಲಾಧಿಕಾರಿಗಳು ಘಟನೆ ಸಂಬಂಧ ಆಸ್ಪತ್ರೆಯಿಂದ ವರದಿ ಕೇಳಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT