ಕೊರೋನಾ ಮೂರನೇ ಅಲೆಯಲ್ಲಿ ನೀವು ಉಳಿತಿರೋ ಇಲ್ಲವೋ ಗೊತ್ತಿಲ್ಲ, ನಾನಂತೂ ಬದುಕಬೇಕು: ಮತ್ತೆ 'ಕತ್ತಿ' ವರಸೆ
ಕೊರೋನಾ ಮೂರನೇ ಅಲೆ ಬರುತ್ತೆ, ನಾವು, ನೀವು ಉಳಿಯಬೇಕು. ನೀವು ಉಳಿಯುತ್ತೀರೋ ಇಲ್ಲವೋ ಗೊತ್ತಿಲ್ಲ, ನಾನಂತೂ ಉಳಿಯಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಹೇಳಿಕೆ ನೀಡಿದ್ದಾರೆ.
ಬಾಗಲಕೋಟೆ: ಕೊರೋನಾ ಮೂರನೇ ಅಲೆ ಬರುತ್ತೆ, ನಾವು, ನೀವು ಉಳಿಯಬೇಕು. ನೀವು ಉಳಿಯುತ್ತೀರೋ ಇಲ್ಲವೋ ಗೊತ್ತಿಲ್ಲ, ನಾನಂತೂ ಉಳಿಯಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಮತ್ತೆ ವಿವಾದಾಸ್ಪದ ಹೇಳಿಕೆ ನೀಡಿದ್ದಾರೆ.
ರಬಕವಿ- ಬನಹಟ್ಟಿನಗರದಲ್ಲಿ ಶನಿವಾರ ನಡೆದ ಸರ್ಕಾರಿ ಹಾಗೂ ಖಾಸಗಿ ವೈದ್ಯರ ಸಭೆಯಲ್ಲಿ ಸಚಿವ ಕತ್ತಿ ಮಾತನಾಡಿದರು. ಮೂರನೇ ಅಲೆಗೆ ಆಕ್ಸಿಜನ್ ಸಾಂದ್ರಕ ಯಂತ್ರಗಳನ್ನು ಸರ್ಕಾರ ಹೆಚ್ಚು ನೀಡಬೇಕು ಎಂದು ವೈದ್ಯರು ಒತ್ತಾಯಿಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಸಚಿವರು ಮೂರನೇ ಅಲೆ ಬಂದಾಗ ನೋಡೋಣ ಎಂದರು, ಇದಕ್ಕೆ ಉತ್ತರಿಸಿದ ವೈದ್ಯರು ನಾವು ಉಳಿದರೇ ನೋಡೋಣ ಎಂದಾಗ, ನೀವು ಉಳಿಯಿತ್ತಿರೋ ಇಲ್ಲವೋ ನಾನಂತು ಉಳಿಯಬೇಕು ಎಂದು ಉಮೇಶ್ ಕತ್ತಿ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.