ರಾಜ್ಯ

ಬೆಡ್ ಬ್ಲಾಕಿಂಗ್: ನಗರದ 3 ಆಸ್ಪತ್ರೆಗಳ ಪಾತ್ರ ಖಚಿತ, ಕ್ರಮಕ್ಕೆ ಮುಂದಾದ ಪೊಲೀಸರು

Manjula VN

ಬೆಂಗಳೂರು: ಬಿಬಿಎಂಪಿ ವಾರ್ ರೂಂನಲ್ಲಿ ನಡೆದಿದೆ ಎನ್ನಲಾದ ಬೆಡ್ ಬ್ಲಾಕಿಂಗ್ ಪ್ರಕರಣದಲ್ಲಿ ಮೂರು ಖಾಸಗಿ ಆಸ್ಪತ್ರೆಗಳ ಪಾತ್ರ ಇರುವುುದ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ತನಿಖೆಯಲ್ಲಿ ಖಚಿತವಾಗಿದ್ದು, ಇದೀಗ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆಂದು ತಿಳಿದುಬಂದಿದೆ. 

ಪ್ರಕರಣದಲ್ಲಿ ಬಂಧಿನಕ್ಕೊಳಗಾಗಿರುವ ಆರೋಪಿಗಳ ಹೇಳಿಕೆ ಆಧರಿಸಿ 20 ಖಾಸಗಿ ಆಸ್ಪತ್ರೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಸದರಿ ಆಸ್ಪತ್ರೆಗಳಲ್ಲಿ ಬಿಬಿಎಂಪಿ ವಾರ್ ರೂಂನಿಂದ ಶಿಫಾರಸುಗೊಂಡ ಸೋಂಕಿತರ ದತ್ತಾಂಶ ಹಾಗೂ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಯನ್ನು ಸಿಸಿಬಿ ವಶಪಡಿಸಿಕೊಂಡಿದ್ದರು. 

ಬಳಿಕ ದತ್ತಾಂಶಗಳ ಪರಿಶೀಲಿಸಿದಾಗ ಮೂರು ಆಸ್ಪತ್ರೆಗಳ ಪಾತ್ರ ದೃಢಪಟ್ಟಿದೆ. ಆದರ ಆಧಾರದ ಮೇಲೆ ಇದೀಗ ಪೊಲೀಸರು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆಂದು ವರದಿಗಳು ತಿಳಿಸಿವೆ. 

ಆಸ್ಪತ್ರೆಯ ಸಿಬ್ಬಂದಿಗಳು, ಆರೋಗ್ಯಮಿತ್ರಾ ಕಾರ್ಯಕರ್ತರು ಹಾಗೂ ಇತರೆ ಸಿಬ್ಬಂದಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ತನಿಖೆಯ ವರದಿಯನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುತ್ತೆದ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಈ ನಡುವೆ ಜೀವನ್ ಭೀಮಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

SCROLL FOR NEXT