ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜ್ಯ

ಕೊರೋನಾ ಚೈನ್ ಬ್ರೇಕ್ ಮಾಡಲು ಸಂಸದರು ಮತ್ತು ಶಾಸಕರು ತಮ್ಮತಮ್ಮ ಕ್ಷೇತ್ರಗಳಲ್ಲಿ ಉಳಿಯುವಂತೆ ಸಿಎಂ ಮನವಿ

ಕೋವಿಡ್ ಸೋಂಕಿನ ಸರಪಳಿಯನ್ನು ಮುರಿಯಲು ಇಂದಿನಿಂದ ಮತ್ತಷ್ಟು ಕಠಿಣ ಕ್ರಮಗಳನ್ನು ವಿಧಿಸಲಾಗಿದೆ. ಎಲ್ಲಾ ಸಂಸದರು ಮತ್ತು ಶಾಸಕರು ತಮ್ಮತಮ್ಮ ಕ್ಷೇತ್ರಗಳಲ್ಲಿ ಉಳಿಯಬೇಕು. ಕಠಿಣ ನಿಯಮದ ಉದ್ದೇಶ ಈಡೇರುವ....

ಬೆಂಗಳೂರು: ಕೋವಿಡ್ ಸೋಂಕಿನ ಸರಪಳಿಯನ್ನು ಮುರಿಯಲು ಇಂದಿನಿಂದ ಮತ್ತಷ್ಟು ಕಠಿಣ ಕ್ರಮಗಳನ್ನು ವಿಧಿಸಲಾಗಿದೆ. ಎಲ್ಲಾ ಸಂಸದರು ಮತ್ತು ಶಾಸಕರು ತಮ್ಮತಮ್ಮ ಕ್ಷೇತ್ರಗಳಲ್ಲಿ ಉಳಿಯಬೇಕು. ಕಠಿಣ ನಿಯಮದ ಉದ್ದೇಶ ಈಡೇರುವ ನಿಟ್ಟಿನಲ್ಲಿ ಕಟ್ಟುನಿಟ್ಟಾಗಿ ನಿಯಮಗಳು ಜಾರಿಯಾಗುವುದನ್ನು ಖಚಿತಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮನವಿ ಮಾಡಿದ್ದಾರೆ.

ಇಂದು ಟ್ವೀಟ್ ಮೂಲಕ ಮನವಿ ಮಾಡಿರುವ ಸಿಎಂ, ಎಲ್ಲರ ಸಕ್ರಿಯ ಸಹಕಾರವಿಲ್ಲದೆ ಇದು ಯಶಸ್ವಿಯಾಗುವುದಿಲ್ಲ. ಈನಿಟ್ಟಿನಲ್ಲಿ ಏನೇ ಅಡೆತಡೆ, ಸಮಸ್ಯೆಗಳಿದ್ದರೆ, ದಯವಿಟ್ಟು ಅದನ್ನು ಜಿಲ್ಲಾಧಿಕಾರಿಗಳ, ಜಿಲ್ಲಾ ಉಸ್ತುವಾರಿ ಸಚಿವರ ಅಥವಾ ನೇರವಾಗಿ ನನ್ನ ಗಮನಕ್ಕೆ ತನ್ನಿ. ಒಟ್ಟಾಗಿ ನಾವು ಕೊರೋನಾವನ್ನು ಸೋಲಿಸೋಣ. ಸಾರ್ವಜನಿಕರು ಕೂಡ ಸೋಂಕು ನಿಯಂತ್ರಿಸಲು ಸಹಕರಿಸಬೇಕು ಎಂದಿದ್ದಾರೆ.

ಕೊರೋನಾ ಸೋಂಕು ಹರಡುವುದನ್ನು ತಡೆಯಲು ನಾವು 14 ದಿನ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸೋಣ. ಮಾರ್ಗಸೂಚಿಗಳನ್ನು ತಪ್ಪದೆ ಅನುಸರಿಸಿ ಸೋಂಕು ನಿಯಂತ್ರಿಸಲು ಸರ್ಕಾರದೊಂದಿಗೆ ಸಹಕರಿಸಿ ಎಂದು ಸಿಎಂ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT