ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಭಯ: ತರೀಕೆರೆ ಮಾಜಿ ಉಪ ತಹಶೀಲ್ದಾರ್ ಆತ್ಮಹತ್ಯೆ!

ಕೊರೋನಾ ಭಯದಿಂದ ಮಾಜಿ ಉಪ ತಹಶೀಲ್ದಾರ್ ಒಬ್ಬರು ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ನಡೆದಿದೆ.

ತರೀಕೆರೆ/ಚಾಮರಾಜನಗರ: ಕೊರೋನಾ ಭಯದಿಂದ ಮಾಜಿ ಉಪ ತಹಶೀಲ್ದಾರ್ ಒಬ್ಬರು ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ನಡೆದಿದೆ.

ಮೃತರನ್ನು ಸೋಮನಾಯಕ್ ಎಂದು ಗುರುತಿಸಲಾಗಿದೆ.

ತರೀಕೆರೆಯ ಬೇಲೇನಹಳ್ಳಿ ತಾಂಡಾ ನಿವಾಸಿಯಾಗಿದ್ದ ಸೋಮನಾಯಕ್ ತಮ್ಮ ಕಾರಿನಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಸಂಬಂಧ ತರೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೊರೋನಾಗೆ ಬಲಿ

ಚಾಮರಾಜನಗರ ಜಿಲ್ಲಾ ಕ್ರೀಡಾ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದ ಚೆಲುವಯ್ಯ  ಅವರು ಕೊರೋನಾದಿಂದ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು.

ಕೆಲ ದಿನಗಳ ಹಿಂದೆ ಕೊರೋನಾ ಸೋಂಕು ಕಾಣಿಸಿಕೊಂಡ ನಂತರ ಚೆಲುವಯ್ಯ ಸಂತೆ ಮರಳ್ಳಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಂದ ಹೆಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಚೆಲುವಯ್ಯ  ಅಸುನೀಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT