ಸಾಂದರ್ಭಿಕ ಚಿತ್ರ 
ರಾಜ್ಯ

ಕೋಲಾರಕ್ಕೆ ನಿಗದಿ ಮಾಡಿದ್ದ ಆಕ್ಸಿಜನ್ ಘಟಕ ಅಂತಿಮ ಕ್ಷಣದಲ್ಲಿ ತುಮಕೂರಿಗೆ ಶಿಫ್ಟ್!

ಕೆಜಿಎಫ್ ಜನರಲ್ ಆಸ್ಪತ್ರೆಯಲ್ಲಿ ಸ್ಥಾಪಿಸಬೇಕಾಗಿದ್ದ ಆಮ್ಲಜನಕ ಸ್ಥಾವರ ಕೊನೆ ಕ್ಷಣದಲ್ಲಿ ತುಮಕೂರಿಗೆ ಸ್ಥಳಾಂತರವಾಗಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಕೋಲಾರ: ಕೆಜಿಎಫ್ ಜನರಲ್ ಆಸ್ಪತ್ರೆಯಲ್ಲಿ ಸ್ಥಾಪಿಸಬೇಕಾಗಿದ್ದ ಆಮ್ಲಜನಕ ಸ್ಥಾವರ ಕೊನೆ ಕ್ಷಣದಲ್ಲಿ ತುಮಕೂರಿಗೆ ಸ್ಥಳಾಂತರವಾಗಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಕೋಲಾರದಲ್ಲಿ  ಆಮ್ಲಜನಕ ಸ್ಥಾವರ ನಿರ್ಮಾಣ ಮಾಡಲು ಅಧಿಕಾರಿಗಳು ಎಲ್ಲಾ ರೀತಿಯ ಸಿದ್ಧತೆ ನಡೆಸಿದ್ದರು, ಆದರೆ ಅಂತಿಮ ಸಮಯದಲ್ಲಿ ತುಮಕೂರಿಗೆ ಶಿಫ್ಟ್ ಆಗಿದೆ.

ಕೇಂದ್ರ ಸರ್ಕಾರದಿಂದ ರಾಜ್ಯದಲ್ಲಿ ಎರಡು ಘಟಕ ಸ್ಥಾಪಿಸಲು ಅನುಮೋದನೆ ನೀಡಲಾಗಿತ್ತು, ಕೆಜಿಎಫ್ ನಲ್ಲಿ ಮತ್ತೊಂದು ಮೈಸೂರು ಜಿಲ್ಲೆಯ ಎಚ್.ಡಿ ಕೋಟೆಯಲ್ಲಿ.

ಕೆಜಿಎಫ್ ನಲ್ಲಿ ಆಕ್ಸಿಜನ್ ಸ್ಥಾವರ ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಜಿಲ್ಲಾಧಿಕಾರಿ ಡಾ,ಸೆಲ್ವಮನಿ ಇದರ ಕಾರ್ಯಗಳಿಗಾಗಿ ಇಬ್ಬರು ಹಿರಿಯ ಅಧಿಕಾರಿಗಳನ್ನು ನಿಯೋಜಿಸಿದ್ದರು. ಇದರಲ್ಲಿ ನಗರಸಭೆಯ ಇಬ್ಬರು ಇಂಜಿನೀಯರ್ ಗಳು ಕೂಡ ಇದ್ದರು. ಆಮ್ಲಜನಕ ಸ್ಥಾವರ ಸ್ಥಾಪಿಸಲು ಕ್ರೇನ್ ಮತ್ತು ಅಗತ್ಯ ಉಪಕರಣಗಳನ್ನು ಸಿದ್ಧಪಡಿಸಲಾಗಿತ್ತು.

ಆಮ್ಲಜನಕ ಸ್ಥಾವರ ಸ್ಥಾಪನೆಗಾಗಿ ಕೆಜಿಎಫ್ ಜಿಲ್ಲಾ ಸರ್ಜನ್ ಡಾ. ಶಿವಕುಮಾರ್ ಎರಡು ಸ್ಥಳಗಳನ್ನು ಗುರುತಿಸಿದ್ದರು. ಆದರೆ ಸಂಜೆಯ ವೇಳೆಗೆ ತುಮಕೂರಿಗೆ ಸ್ಥಳಾಂತರವಾಗಿದೆ ಎಂಬ ಆದೇಶ ತಲುಪಿತು.

ನಿಮಿಷಕ್ಕೆ 500 ಲೀಟರ್ ಆಮ್ಲಜನಕವನ್ನು ಉತ್ಪಾದಿಸುವ ಆಮ್ಲಜನಕ ಸ್ಥಾವರವನ್ನು 100 ಹಾಸಿಗೆಗಳ ಕೆಜಿಎಫ್ ಜನರಲ್ ಆಸ್ಪತ್ರೆಯಲ್ಲಿ ಸ್ಥಾಪಿಸಿದ್ದರೇ ನೂರಾರು ಜೀವಗಳನ್ನು ಉಳಿಸಬಹುದಿತ್ತು ಎಂದು ಕೋಲಾರ ಸಂಸದ ಎಸ್ ಮುನಿಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT