ರಕ್ಷಣೆ ನೀಡುವಂತೆ ಜಿಲ್ಲಾಡಳಿತಕ್ಕೆ ವೈದ್ಯರ ಮನವಿ 
ರಾಜ್ಯ

ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಸ್ಥಾಪನೆ: ಬೆಳಗಾವಿ ಆಸ್ಪತ್ರೆಯಲ್ಲಿ ಸ್ಥಳೀಯರಿಂದ ವೈದ್ಯರ ಮೇಲೆ ಹಲ್ಲೆ

ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಖಾಸಗಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ನಗರದಲ್ಲಿ ಬೆಳಕಿಗೆ ಬಂದಿದೆ.

ಬೆಳಗಾವಿ: ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಖಾಸಗಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ನಗರದಲ್ಲಿ ಬೆಳಕಿಗೆ ಬಂದಿದೆ.

ಶಹಾಪುರದಲ್ಲಿರುವ ಮಾಯಿ ಆಸ್ಪತ್ರೆಯಲ್ಲಿ ಕೋವಿಡ್‌ ಕೇಂದ್ರ ಆರಂಭಿಸಲಾಗಿದ್ದು ಇದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾತ್ರಿ ಸುಮಾರು 10.30ರ ಸುಮಾರಿಗೆ 200ಕ್ಕೂ ಅಧಿಕ ಜನರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರು ಹಾಗೂ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. ಇವರೆಲ್ಲಾ ಮದ್ಯ ಸೇವಿಸಿದ್ದು ನರ್ಸ್ ಮತ್ತು ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎದು ಮಾಯಿ ಆಸ್ಪತ್ರೆ ವೈದ್ಯ ಡಾ.ಮಿಲಿಂದ್ ಹಾಲ್ಗೇಕರ್ ಹೇಳಿದ್ದಾರೆ.

ಘಟನೆ ನಡೆದ ನಂತರ ಪೊಲೀಸರಿಂದ ನಮಗೆ ಯಾವುದೇ ರಕ್ಷಣೆ ದೊರೆತಿಲ್ಲ, ಹೀಗಾಗಿ ಸಂಬಂಧ ಪಟ್ಟವರು ನಮಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ತಮ್ಮ ಜೀವವನ್ನ ಅಪಾಯದ ಅಂಚಿನಲ್ಲಿರಿಸಿಕೊಂಡು ನಗರದಲ್ಲಿ ವೈದ್ಯಕೀಯ ಸಿಬ್ಬಂದಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಐಎಂಎ ಬೆಳಗಾವಿ ಅಧ್ಯಕ್ಷ ಡಾ.ಅನಿಲ್ ಪಾಟೀಲ್ ಹೇಳಿದ್ದಾರೆ.

ಡಾ. ಪಾಟೀಲ್ ನೇತೃತ್ವದ ವೈದ್ಯರ ತಂಡ  ಜಿಲ್ಲಾಧಿಕಾರಿ ಮಹಂತೇಶ್ ಹಿರೆಮಠ್ ಮತ್ತು ಎಸ್ಪಿ ಲಕ್ಷ್ಮಣ್ ನಿಂಬರ್ಗಿ ಅವರನ್ನು ಭೇಟಿ ಮಾಡಿ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿತು. ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್,  ಅಂಜಲಿ ನಿಂಬಾಳ್ಕರ್ ಮತ್ತು ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಕೋವಿಡ್  ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಸಿಬ್ಬಂದಿಯನ್ನು ರಕ್ಷಿಸಬೇಕೆಂದು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!