ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾಗೆ 480 ಬಲಿ, ಬೆಂಗಳೂರಿನಲ್ಲಿ 15,879 ಸೇರಿ 39,510 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಸೋಮವಾರ ಒಂದೇ ದಿನ ಬರೋಬ್ಬರಿ 480 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 19852ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 39,510 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ
20,13,193ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 15,879 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,83,519ಕ್ಕೆ ಏರಿಕೆಯಾಗಿದೆ. ಇನ್ನು
ನಗರದಲ್ಲಿ ಸೋಂಕಿಗೆ 259 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 22584 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ
ಚೇತರಿಸಿಕೊಂಡವರ ಸಂಖ್ಯೆ 14,05,869ಕ್ಕೆ ಏರಿಕೆಯಾಗಿದೆ. ಇನ್ನು 5,87,452 ಸಕ್ರೀಯ ಪ್ರಕರಣಗಳಿವೆ.

SCROLL FOR NEXT