ಸಾಂದರ್ಭಿಕ ಚಿತ್ರ 
ರಾಜ್ಯ

ವಲಸೆ ಕಾರ್ಮಿಕರ ನಿರ್ವಹಣೆಗೆ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ನಿಯೋಜನೆ

ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಲಸೆ ಕಾರ್ಮಿಕರನ್ನು ನಿರ್ವಹಿಸಲು  ಹೆಚ್ಚುವರಿಯಾಗಿ ಕಾರ್ಯಪಡೆ ನಿಯೋಜಿಸಲಾಗಿದೆ.

ಬೆಂಗಳೂರು: ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಲಸೆ ಕಾರ್ಮಿಕರನ್ನು ನಿರ್ವಹಿಸಲು  ಹೆಚ್ಚುವರಿಯಾಗಿ ಕಾರ್ಯಪಡೆ ನಿಯೋಜಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾತ್ ರಾಜ್ ಇಲಾಖೆ ಹೊರಡಿಸಿರುವ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ಗೆ ಸಲ್ಲಿಸಲಾಗಿದೆ. ಈ ಕಾರ್ಯಪಡೆ ವಲಸೆ ಕಾರ್ಮಿಕರು, ದುರ್ಬಲ ವರ್ಗದ ಜನರಿಗೆ ಆಹಾರ, ಮಾಸ್ಕ್ ಮತ್ತು ಸ್ಯಾನಿಟೈಸರ್ ಸ್ಯಾನಿಟೈಸರ್ ನೀಡಬೇಕೆಂದು ತಿಳಿಸಿದೆ.

ನಿರ್ಗತಿಕರು, ವಿಶೇಷವಾಗಿ ವಿಕಲಚೇತನರು, ಹಿರಿಯ ನಾಗರಿಕರು, ಮಾಜಿ ದೇವದಾಸಿಗಳು, ತೃತೀಯ ಲಿಂಗಿಗಳು ಮತ್ತು ಮಹಿಳೆಯರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಕಾರ್ಯಪಡೆಗಳಿಗೆ ನಿರ್ದೇಶಿಸಲಾಗಿದೆ.

ಹೆಚ್ಚಿನ ಜನರು ಲಸಿಕೆ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಅವರು ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಎರಡನೇ ಡೋಸ್ ಪಡೆದ ನಂತರ ಅವರಿಗೆ ಪ್ರಮಾಣಪತ್ರವನ್ನು ನೀಡಬೇಕು ಎಂದು ತಿಳಿಸಿದೆ.

ಸ್ವಯಂಸೇವಕರನ್ನು ಕಾರ್ಯಪಡೆ ಗುರುತಿಸಬೇಕು ಮತ್ತು ಅವರ ಸಂಪರ್ಕ ಸಂಖ್ಯೆಗಳು ಎಲ್ಲರಿಗೂ ಲಭ್ಯವಾಗಬೇಕು. 14 ನೇ ಹಣಕಾಸು ಆಯೋಗದ ಅಡಿಯಲ್ಲಿ ಒದಗಿಸಲಾದ ಅನುದಾನದ ಬಾಕಿ, 16 ನೇ ಹಣಕಾಸು ಆಯೋಗದ ಅಡಿಯಲ್ಲಿ ಲಭ್ಯವಿರುವ ಹಣ ಬಳಸಿಕೊಂಡು, ಮಾಸ್ಕ್ ಮತ್ತು ಸಾಬೂನುಗಳಿಗಾಗಿ ವೆಚ್ಚವನ್ನು ಪೂರೈಸಲು ಅವರ ಸ್ವಂತ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ಗ್ರಾಮ ಪಚಾಯತ್‌ಗಳಿಗೆ ನಿರ್ದೇಶನ ನೀಡಿ, ಸಮುದಾಯ ಸಹಾಯವಾಣಿಗಳನ್ನು ಮಾಡಲು ಆರ್‌ಡಿಪಿಆರ್ ಇಲಾಖೆ ಕಾರ್ಯಪಡೆಗಳಿಗೆ ನಿರ್ದೇಶನ ನೀಡಿದೆ.

ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತ್ತು ತಾಲ್ಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಾರ್ಯಪಡೆಗಳಿಗೆ ಸಹಾಯ ಮಾಡುವಂತೆ ನಿರ್ದೇಶಿಸಲಾಗಿದೆ. ಆಯಾ ಗ್ರಾಮ ಪಂಚಾಯಿತಿಗಳೊಳಗಿನ ಪರಿಸ್ಥಿತಿಯನ್ನು ಚರ್ಚಿಸಲು ಮತ್ತು ವರದಿ ಮಾಡಲು ಪ್ರತಿ ಸೋಮವಾರ ಮತ್ತು ಗುರುವಾರ ಸಭೆಗಳನ್ನು ಕರೆಯುವಂತೆ ಕಾರ್ಯಪಡೆಗಳಿಗೆ ನಿರ್ದೇಶಿಸಲಾಗಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ಅವರಿಗೆ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ತರಬೇತಿ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT