ರಾಜ್ಯ

ಬೆಡ್ ಬ್ಲಾಕಿಂಗ್ ದಂಧೆ: ಮತ್ತೋರ್ವ ಆರೋಪಿ ಬಂಧನ

Manjula VN

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೋವಿಡ್ ವಾರ್ ರೂಂನಲ್ಲಿ ನಡೆದ ಬೆಡ್ ಬ್ಲಾಕಿಂಗ್ ಪ್ರಕರಣ ಕುರಿತು ತನಿಖೆ ಮುಂದುವರೆಸಿರುವ ಕೇಂದ್ರ ಅಪರಾಧ ವಿಭಾಗದ ಪೊಲೀಸರು, ಪ್ರಕರಣ ಸಂಬಂಧ ಮತ್ತೊಬ್ಬ ಅರೋಪಿಯನ್ನು ಬುಧವಾರ ಬಂಧಿಸಿದ್ದಾರೆಂದು ತಿಳಿದುಬಂದಿದೆ. 

ನಗರದ ಸಪ್ತಗಿರಿ ಆಸ್ಪತ್ರೆಯ ಮಾರ್ಕೆಟಿಂಗ್ ವಿಭಾಗದಲ್ಲಿ ಕಾರ್ಯನಿರ್ವಾಹಕನಾಗಿ ಕರ್ತವ್ಯನಿರ್ವಹಿಸುತ್ತಿದ್ದ ಆ್ಯಂಟನಿ ಬಂಧಿತ ಆರೋಪಿಯಾಗಿದ್ದಾನೆಂದು ತಿಳಿದುಬಂದಿದೆ. 

ಆರೋಪಿ ಆ್ಯಂಟನಿ ಸೋಂಕಿತ ವ್ಯಕ್ತಿಗಳಿಂದ ಹಣ ಪಡೆದುಕೊಂಡು ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಬೆಡ್ ಕೊಡಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಪ್ರಕರಣ ಸಂಬಂಧ ಈವರೆಗೂ 10 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದ್ದು, 10 ಮಂದಿ ಪೈಕಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಹೇಳಿದ್ದಾರೆ. 

SCROLL FOR NEXT