ವಿನೋದ್ ಸವದಿ 
ರಾಜ್ಯ

ಡಿಸಿಎಂ ಲಕ್ಷ್ಮಣ ಸವದಿ ಸಹೋದರನ ಪುತ್ರ ಕೊರೋನಾದಿಂದ ಸಾವು

ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಸಹೋದರನ ಪುತ್ರ ವಿನೋದ್ ಸವದಿ ಕೋವಿಡ್​ಗೆ ಬಲಿಯಾಗಿದ್ದಾರೆ.

ಬೆಳಗಾವಿ: ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಸಹೋದರನ ಪುತ್ರ ವಿನೋದ್ ಸವದಿ ಕೋವಿಡ್​ಗೆ ಬಲಿಯಾಗಿದ್ದಾರೆ.

ಲಕ್ಷ್ಮಣ ಸವದಿ ಅವರ ಸಹೋದರ, ಕೃಷ್ಣ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಪರಪ್ಪ ಸವದಿ ಅವರ ಪುತ್ರ ವಿನೋದ್ ಸವದಿ, ವಾರದ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನ ಹೊಂದಿದ್ದಾರೆ.

ಈ ಬಗ್ಗೆ ಸಚಿವ ಲಕ್ಷ್ಮಣ ಸವದಿ ಟ್ವೀಟ್ ಮಾಡಿದ್ದು "ಕೃಷ್ಣಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಪರಪ್ಪ ಸವದಿ ಅವರ ಜೇಷ್ಠ ಪುತ್ರ ವಿನೋದ  ಸವದಿ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ." ಎಂದು ಸಂತಾಪ ಸೂಚಿಸಿದ್ದಾರೆ.

ಬೆಳಗಾವಿ ಭಾಗದಲ್ಲಿ ಸಾರ್ವಜನಿಕ ಮತ್ತು ಸಾಮಾಜಿಕ ಕೆಲಸಗಳಲ್ಲಿ ಯುವ ಮುಖಂಡರಾಗಿ ವಿನೋದ್ ಸವದಿ ಗುರುತಿಸಿಕೊಂಡಿದ್ದರು.

ಕಳೆದ ಬಾರಿ ಲಾಕ್ ಡೌನ್ ಸಂದರ್ಭದಲ್ಲಿ ವಿನೋದ್ ಅವರು ಬಡವರಿಗೆ ಮತ್ತು ನಿರ್ಗತಿಕರಿಗೆ ಆಹಾರ ಪದಾರ್ಥಗಳನ್ನು ಉಚಿತವಾಗಿ ಹಂಚಿಕೆ ಸೇರಿ ಇತರ ಸಾಮಾಜಿಕ ಕೆಲಸಗಳಲ್ಲಿಯೂ ಅವಿರತವಾಗಿ ಕೆಲಸ ಮಾಡಿದ್ದರು.

ಕೇವಲ 36 ವರ್ಷಗಳಲ್ಲಿಯೇ ಅವರ ಬದುಕು ಅಂತ್ಯಗೊಂಡಿದ್ದು ನಿಜಕ್ಕೂ ಬೇಸರದ ಸಂಗತಿ ಎಂದು ವಿನೋದ ಅವರ ಆತ್ಮೀಯ ಸ್ನೇಹಿತರ ಬಳಗ ಕಂಬನಿ ಮಿಡಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT