ಸಾಂದರ್ಭಿಕ ಚಿತ್ರ 
ರಾಜ್ಯ

ನೇಪಾಳ ಮೂಲದ ನಾಲ್ವರ ಬಂಧನ: 75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಡಿಜೆ ಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಕಳವು ಮಾಡುತ್ತಿದ್ದ ನೇಪಾಳ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಬೆಂಗಳೂರು: ಡಿಜೆ ಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಕಳವು ಮಾಡುತ್ತಿದ್ದ ನೇಪಾಳ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಸೆಕ್ಯುರಿಟಿ ಗಾರ್ಡ್ ಗಳಾದ ಮನೋಜ್(37), ಕೇಶವ ರಾಜ್ ಭಟ್(56),  ಪ್ರಕಾಶ್ ಬಹದ್ದೂರ ಸೂದ್(23) ಹಾಗೂ ವಿಕ್ರಂಸಿಂಗ್(36) ಬಂಧಿತ ಆರೋಪಿಗಳು.

ಬಂಧಿತರಿಂದ 75 ಲಕ್ಷ ರೂ. ಮೌಲ್ಯದ 221 ಗ್ರಾಂ ಚಿನ್ನದ ಆಭರಣಗಳು, 13 ಗ್ರಾಂ ವಜ್ರದ ಆಭರಣಗಳು ಹಾಗೂ 500 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಪ್ರಕರಣಗಳ ತಡೆಗೆ ವಿಶೇಷ ಕ್ರಮ ಕೈಗೊಂಡು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೆಜಿ ಹಳ್ಳಿ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಜಗದೀಶ್ ಕೆ ಎಸ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸುವ ಎಲ್ಲ ಪ್ರಯತ್ನಗಳನ್ನು ಸ್ವಾಗತಿಸಲಾಗುತ್ತದೆ': ಪುಟಿನ್ ಜೊತೆಗೆ ಪ್ರಧಾನಿ ಮೋದಿ ಮಾತುಕತೆ

ICC: ಪುರುಷರ ವಿಶ್ವಕಪ್ ಟ್ರೋಫಿಗಿಂತಲೂ ಮಹಿಳೆಯರ ವಿಶ್ವಕಪ್ ಬಹುಮಾನ ಹಣ ದುಪ್ಪಟ್ಟಾಯ್ತು!

ಏರ್ ಇಂಡಿಯಾ ವಿಮಾನದ ಕಾಕ್‌ಪಿಟ್‌ನಲ್ಲಿ ಬೆಂಕಿಯ ಸೂಚನೆ; ದೆಹಲಿಯಲ್ಲಿ ತುರ್ತು ಭೂಸ್ಪರ್ಶ

ಆಗಸ್ಟ್‌ನಲ್ಲಿ 20 ಬಿಲಿಯನ್ ದಾಟಿದ ಯುಪಿಐ ವಹಿವಾಟು

Dharmasthala ಪ್ರಕರಣದಲ್ಲಿ 'ಬಹಳ ದೊಡ್ಡ ಪಿತೂರಿ'; ತನಿಖೆಯನ್ನು NIA ಅಥವಾ CBIಗೆ ವಹಿಸಬೇಕು: BY ವಿಜಯೇಂದ್ರ ಆಗ್ರಹ

SCROLL FOR NEXT