ವಿಧಾನ ಸೌಧದಲ್ಲಿ ನಿನ್ನೆ ನಡೆದ ಕಾಂಗ್ರೆಸ್ ನಾಯಕರ ಸಭೆ 
ರಾಜ್ಯ

ಕೋವಿಡ್ ಲಸಿಕೆ ಬಗ್ಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಜನತೆಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ: ಸಿದ್ದರಾಮಯ್ಯ ಆರೋಪ 

ಲಾಕ್ ಡೌನ್ ಸಮಯದಲ್ಲಿ ಬಡವರಿಗೆ, ನಿರ್ಗತಿಕರಿಗೆ ಬಹಳ ಸಮಸ್ಯೆಯಾಗಿದೆ, ರಾಜ್ಯ ಸರಕಾರ ಅವರತ್ತ ಗಮನಹರಿಸಬೇಕು, ಹಣಕಾಸು ಪ್ಯಾಕೇಜ್ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನ ಸೌಧ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು: ಲಾಕ್ ಡೌನ್ ಸಮಯದಲ್ಲಿ ಬಡವರಿಗೆ, ನಿರ್ಗತಿಕರಿಗೆ ಬಹಳ ಸಮಸ್ಯೆಯಾಗಿದೆ, ರಾಜ್ಯ ಸರಕಾರ ಅವರತ್ತ ಗಮನಹರಿಸಬೇಕು, ಹಣಕಾಸು ಪ್ಯಾಕೇಜ್ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನ ಸೌಧ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಸಲೀಮ್ ಅಹ್ಮದ್, ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಮೊದಲಾದವರು ನಿನ್ನೆ ವಿಧಾನ ಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ರಾಜ್ಯ ಸರ್ಕಾರ ಪರಿಣಾಮಕಾರಿಯಾಗಿ ಕೆಲಸ ಮಾಡಲು ವಿಫಲವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಬಗ್ಗೆ ಅಸಡ್ಡೆ ವಹಿಸಿದ್ದು ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಕೂಡ ಪರಿಣಾಮಕಾರಿಯಾಗಿ ಎದುರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರು ಲಸಿಕೆ ತೆಗೆದುಕೊಳ್ಳಬಹುದೆಂದು ಘೋಷಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನರ ಹಾದಿ ತಪ್ಪಿಸಿದ್ದಾರೆ. 45ರಿಂದ 60 ವರ್ಷದವರೆಗಿನವರಿಗೆ ನೀಡಲು ಸರ್ಕಾರದ ಬಳಿ ಸಾಕಷ್ಟು ಕೊರೋನಾ ಲಸಿಕೆಯಿಲ್ಲದಿರುವಾಗ 45 ವರ್ಷಕ್ಕಿಂತ ಕೆಳಗಿನವರಿಗೆ ಸರ್ಕಾರ ಅಷ್ಟು ತರಾತುರಿಯಲ್ಲಿ ಘೋಷಿಸಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!