ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾಗೆ 344 ಬಲಿ, ಬೆಂಗಳೂರಿನಲ್ಲಿ 15,191 ಸೇರಿ 35,297 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಗುರುವಾರ ಒಂದೇ ದಿನ ಬರೋಬ್ಬರಿ 344 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 20712ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 35,297 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ
20,88,488ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 15,191 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 10,14,996ಕ್ಕೆ
ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 161 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ತಿಳಿಸಿದೆ.

ರಾಜ್ಯದಲ್ಲಿ ಇಂದು  34057 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ
ಚೇತರಿಸಿಕೊಂಡವರ ಸಂಖ್ಯೆ 14,74,678ಕ್ಕೆ ಏರಿಕೆಯಾಗಿದೆ. ಇನ್ನು 5,93,078 ಸಕ್ರೀಯ ಪ್ರಕರಣಗಳಿವೆ.

SCROLL FOR NEXT