ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ವಿರುದ್ಧ ಹೋರಾಡಲು ಮತ್ತಷ್ಟು ಬಲ: ಮೈಸೂರು ಮೂಲದ ಸಂಸ್ಥೆಯಿಂದ ಔಷಧಿ ಅಭಿವೃದ್ಧಿ!

ರಾಜ್ಯದಲ್ಲಿ ಕೊರೋನಾ 2ನೇ ಅಲೆ ಅಬ್ಬರಿಸುತ್ತಿದ್ದು, ಈ ನಡುವಲ್ಲೇ ಮೈಸೂರು ಮೂಲಕ ಕಂಪನಿಯೊಂದು ಕೊರೋನಾ ವಿರುದ್ಧ ಹೋರಾಡುವ ಸಲುವಾಗಿ ಔಷಧಿಯೊಂದನ್ನು ಅಭಿವೃದ್ಧಿಪಡಿಸಿದೆ. ಇದೊಂದು ಮೌಖಿಕ (ಓರಲ್) ಔಷಧಿಯಾಗಿದೆ ಎಂದು ತಿಳಿದುಬಂದಿದೆ. 

ಮೈಸೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಅಬ್ಬರಿಸುತ್ತಿದ್ದು, ಈ ನಡುವಲ್ಲೇ ಮೈಸೂರು ಮೂಲಕ ಕಂಪನಿಯೊಂದು ಕೊರೋನಾ ವಿರುದ್ಧ ಹೋರಾಡುವ ಸಲುವಾಗಿ ಔಷಧಿಯೊಂದನ್ನು ಅಭಿವೃದ್ಧಿಪಡಿಸಿದೆ. ಇದೊಂದು ಮೌಖಿಕ (ಓರಲ್) ಔಷಧಿಯಾಗಿದೆ ಎಂದು ತಿಳಿದುಬಂದಿದೆ. 

ಡಿಆರ್'ಎಂ ಇನ್ನೋವೇಶನ್ಸ್ ಕೃತಕ ಬುದ್ಧಿಮತ್ತೆಯನ್ನು ಬಳಸಿ ಈ ಔಷಧಿಯನ್ನು ಅಭಿವೃದ್ಧಿ ಪಡಿಸಿದೆ. ಡಿಆರ್ಎಂ ಎಂಡಿ ಡಾ.ಮಂಜುನಾಥ್ ಬಿ.ಹೆಚ್ ನೇತೃತ್ವದ ತಜ್ಞರ ತಂಡ ಈ ಔಷಧಿಯನ್ನು ಅಭಿವೃದ್ಧಿಪಡಿಸಿದೆ. 

ರಾಸಾಯನಿಕ ಜೀವಶಾಸ್ತ್ರದ ಪ್ರಯೋಗಾಲಯ, ಮೈಸೂರು ವಿಶ್ವವಿದ್ಯಾಲಯದ ಸಾವಯವ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಡಾ.ಬಸಪ್ಪ ಮತ್ತು ಜೆಎಸ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರೊಫೆಸರ್ ಮಹೇಶ್ ಪಿಎ ಅವರು ಔಷಧಿಯನ್ನು ಅಭಿವೃದ್ಧಿಪಡಿಸಿದ್ದಾರೆ. 

ಈ ಔಷಧಿಯು ಕೋಶ ಆಧಾರಿತ ವ್ಯವಸ್ಥೆಗಳಲ್ಲಿ ವೈರಸ್ ಅನ್ನು ಕೊಲ್ಲುವಲ್ಲಿ ಉತ್ತಮ ಪ್ರತಿಬಂಧಕ ಪರಿಣಾಮಗಳನ್ನು ಬೀರುತ್ತವೆ ಎಂದು ಹೇಳಲಾಗುತ್ತಿದ್ದು, ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯ ಡಾ. ಪ್ರಿಯಾ ಅಬ್ರಹಾಂ, ಡಾ. ಅನಿತಾ ಶೇಟ್ ಮತ್ತು ಡಾ. ಪ್ರಜ್ಞಾ ಜಾಧವ್ ಅವರ ಅಧ್ಯಯನಗಳು ಇದನ್ನು ದೃಢಪಡಿಸಿದೆ. 

ಮೈಸೂರಿನ ಜೆಎಸ್‌ಎಸ್ ಫಾರ್ಮಸಿ ಕಾಲೇಜಿನಲ್ಲಿ ಪ್ರಾಣಿ ಅಧ್ಯಯನದ ಪ್ರಾಂಶುಪಾಲರಾದ ಡಾ.ಪ್ರಮೋದ್ ಕುಮಾರ್ ಮತ್ತು ಸಂಶೋಧನಾ ಮುಖ್ಯಸ್ಥ ಶರವಣ ಬಾಬು ಅವರು ಈ ಔಷಧವನ್ನು ಮೌಖಿಕವಾಗಿ ನೀಡಬಹುದು ಎಂದು ದೃಢಪಡಿಸಿದ್ದಾರೆ. 

ಈ ಔಷಧಿಯು ರಕ್ತ-ಮಿದುಳಿನ ತಡೆಗೋಡೆ ದಾಟುವ ಸಾಮರ್ಥ್ಯವನ್ನು ಹೊಂದಿವೆ. ಇತ್ತೀಚಿನ ದಿನಗಳಲ್ಲಿ ಬಹುತೇಕ ಕೊರೋನಾ ಸೋಂಕಿತರು ನರವೈಜ್ಞಾನಿಕ ಸಮಸ್ಯೆಗಳಿಂದ ಬಳಲುತ್ತಿದ್ದು, ರೆಮ್ಡೆಸಿವಿರ್ ಔಷಧಿ ಆ ತಡೆಗೋಡೆಯನ್ನು ದಾಟುವ ಸಾಮರ್ಥ್ಯವನ್ನು ಹೊಂದಿಲ್ಲ. ನಾವು ಅಭಿವೃದ್ಧಿಪಡಿಸಿರುವ ಈ ಔಷಧಿಯು ಮಾನವನ ಮೇಲೆ ಪ್ರಯೋಗಕ್ಕೆ ಹೋಗಲು ಸಿದ್ಧವಿದೆ ಎಂದು ಡಾ.ಮಂಜುನಾಥ್ ಬಿ.ಹೆಚ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!