ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜ್ಯ

ಕೋವಿಡ್-19: ವಿವಿಧ ಜಿಲ್ಲೆಗಳ ವೈದ್ಯರೊಂದಿಗೆ ಸಿಎಂ ವೀಡಿಯೊ ಸಂವಾದ, ಸಂದಿಗ್ಧ ಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕರೆ 

ಕೊರೋನಾ ಎರಡನೇ ಅಲೆ ನಮ್ಮ ನಿರೀಕ್ಷೆ ಮೀರಿದ್ದು, ಇಂತಹ ಸಂದಿಗ್ಧ ಸ್ಥಿತಿಯನ್ನು ಸಮರ್ಥವಾಗಿ ಎದುರಿಸೋಣ  ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರೆ ನೀಡಿದ್ದಾರೆ.

ಬೆಂಗಳೂರು: ಕೊರೋನಾ ಎರಡನೇ ಅಲೆ ನಮ್ಮ ನಿರೀಕ್ಷೆ ಮೀರಿದ್ದು, ಇಂತಹ ಸಂದಿಗ್ಧ ಸ್ಥಿತಿಯನ್ನು ಸಮರ್ಥವಾಗಿ ಎದುರಿಸೋಣ  ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರೆ ನೀಡಿದ್ದಾರೆ.

 ಶನಿವಾರ  ತಮ್ಮ ಗೃಹ ಕಚೇರಿ ಕೃಷ್ಣಾದಿಂದ ರಾಜ್ಯದ ವಿವಿಧ ಜಿಲ್ಲೆಯ ಕೋವಿಡ್ ಚಿಕಿತ್ಸೆಯಲ್ಲಿ ನಿರತ 11 ವೈದ್ಯರೊಂದಿಗೆ ವಿಡಿಯೋ ಸಂವಾದ ನಡೆಸಿ ಕೋವಿಡ್ ನಿಯಂತ್ರಣಕ್ಕೆ‌ ಚಿಕಿತ್ಸೆ ಮತ್ತು ಸಲಹೆ ಪಡೆದು ಮಾತನಾಡಿದರು.ಇಂದಿನ ಪರಿಸ್ಥಿತಿಯಲ್ಲಿ ಜನರ ಜೀವ ಉಳಿಸುವುದು ನಮ್ಮ ಪ್ರಥಮಾದ್ಯತೆ ಆಗಬೇಕಾಗಿದೆ. ಇದಕ್ಕಾಗಿ ಆಕ್ಸಿಜನ್, ಔಷಧಿಗಳು ಹಾಗೂ ಮಾನವ ಸಂಪನ್ಮೂಲಗಳನ್ನು  ಸಮರ್ಪಕವಾಗಿ ಬಳಸುವಂತೆ ಅವರು ತಿಳಿಸಿದರು.

ಕೋವಿಡ್-19 ರ ಮೊದಲನೇ ಅಲೆಗಿಂತಲೂ ಎರಡನೇ ಅಲೆ ನಿರೀಕ್ಷೆಗೂ ಮೀರಿ ಎಲ್ಲೆಡೆ ಸಂದಿಗ್ದತೆಯನ್ನು  ಹುಟ್ಟು ಹಾಕಿದೆ. ಅಲ್ಲದೆ, ವೈದ್ಯ, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರ ಮೇಲೆ ಹೆಚ್ಚಿನ ಒತ್ತಡ ಹೇರಿದೆ,ಇಂತಹ ಸಂದರ್ಭದಲ್ಲಿ ಅವರಿಗೆ ಮನೋಸ್ಥೈರ್ಯವನ್ನು ತುಂಬುವುದು  ನಮ್ಮ ಜವಾಬ್ಧಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
 
ಕೋವಿಡ್ ಸಂದರ್ಭ ತಂದೊಡ್ಡಿರುವ ಸವಾಲುಗಳನ್ನು ಮಾನವೀಯ ನೆಲೆಗಟ್ಟಿನಲ್ಲಿ ಸಮರ್ಥವಾಗಿ ಎದುರಿಸಿ. ಲಭ್ಯವಿರುವ ಸೌಲಭ್ಯಗಳನ್ನು  ಪ್ರಾಮಾಣಿಕವಾಗಿ ಹಾಗೂ ಪಾರದರ್ಶಕತೆಯಿಂದ ಬಳಸಿ ಎಂದು ಹಿತ ನುಡಿದ ಅವರು ಇತರರ ಜೀವ ಉಳಿಸಲು ತಮಗೆ ಬಂದೊದಗಬಹುದಾದ  ಅಪಾಯ ಲೆಕ್ಕಿಸದೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ವೈದ್ಯ, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತ ಸಮೂಹವನ್ನು ರಾಜ್ಯದ  ಅಮೂಲ್ಯ ಆಸ್ತಿ ಎಂದು ಬಣ್ಣಿಸಿದರಲ್ಲದೆ, ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಈ ವೃಂದಕ್ಕೆ ರಾಜ್ಯದ ಜನತೆಯ ಪರವಾಗಿ ಹಾಗೂ ವೈಯುಕ್ತಿಕವಾಗಿಯೂ ಕೃತಜ್ಞತೆ ಸಲ್ಲಿಸಿದರು. 

ಇದೇ ಸಂದರ್ಭದಲ್ಲಿ ಈಗಾಗಲೇ ಸ್ವತಃ ಕೋವಿಡ್ ಸೋಕಿಗೆ ತುತ್ತಾಗಿ, ಗುಣಮುಖರಾಗಿ ತಮ್ಮ ಸೇವೆಗೆ ಹಿಂದಿರುಗಿರುವ ವೈದ್ಯರ ಆರೋಗ್ಯ  ಮತ್ತು ಅವರ ಮನೆಯವರ ಆರೋಗ್ಯವನ್ನು ವಿಚಾರಿಸಿದ ಮುಖ್ಯಮಂತ್ರಿಗಳ ನಡೆಗೆ ವೈದ್ಯರು ಸಹ ತಮ್ಮ ಕೃತಜ್ಞತೆಯನ್ನು ಸಲ್ಲಿಸಿದರು.

ರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ ಕೆ. ವಿ. ತ್ರಿಲೋಕ ಚಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ ಪಿ ಎಸ್ ಹರ್ಷ  ಮುಖ್ಯಮಂತ್ರಿಯವರ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT