ರಾಜ್ಯ

ಇಂದು ಕೊರೋನಾಗೆ 349 ಬಲಿ, ಬೆಂಗಳೂರಿನಲ್ಲಿ ಇಳಿಕೆ, ರಾಜ್ಯದಲ್ಲಿ ಏರಿಕೆ; ಒಟ್ಟು 41,664 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶನಿವಾರ ಒಂದೇ ದಿನ ಬರೋಬ್ಬರಿ 349 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 21434ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 41,664 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ
21,71,934ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 13,402 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 10,42,714ಕ್ಕೆ
ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 94 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ತಿಳಿಸಿದೆ.

ರಾಜ್ಯದಲ್ಲಿ ಇಂದು 34425 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ
ಚೇತರಿಸಿಕೊಂಡವರ ಸಂಖ್ಯೆ 15,44,982ಕ್ಕೆ ಏರಿಕೆಯಾಗಿದೆ. ಇನ್ನು 6,05494 ಸಕ್ರೀಯ ಪ್ರಕರಣಗಳಿವೆ.

SCROLL FOR NEXT