ಕಂಟೈನ್ ಮೆಂಟ್ ವಲಯಗಳ ಪರಿಶೀಲನೆ 
ರಾಜ್ಯ

ಮಿತಿ ಮೀರುತ್ತಿರುವ ಕೋವಿಡ್ ಕೇಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಹೆಚ್ಚಳ!

ಕೋವಿಡ್ ಎರಡನೇ ಅಲೆ ರಾಜ್ಯಾದ್ಯಂತ ಹಲವು ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆಯು ಹೆಚ್ಚುತ್ತಿದೆ.

ಮಂಗಳೂರು: ಕೋವಿಡ್ ಎರಡನೇ ಅಲೆ ರಾಜ್ಯಾದ್ಯಂತ ಹಲವು ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆಯು ಹೆಚ್ಚುತ್ತಿದೆ.

ದಕ್ಷಿಣ  ಕನ್ನಡ ಜಿಲ್ಲೆಯಲ್ಲಿ ಕೇವಲ ನಾಲ್ಕು ದಿನದಲ್ಲಿ 50 ಇದ್ದ ಕಂಟೈನ್ ಮೆಂಟ್ ವಲಯ 132 ಕ್ಕೆ ಏರಿಕೆಯಾಗಿದೆ.  ಶುಕ್ರವಾರ 15 ಸ್ಥಳಗಳನ್ನುಕಂಟೈನ್ ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.

ಮಂಗಳೂರಿನಲ್ಲಿ 56, ಬಂಟ್ವಾಳದಲ್ಲಿ 39,  ಬೆಳ್ತಂಗಡಿ 21, ಸುಳ್ಯ 10 ಮತ್ತು ಪುತ್ತೂರಿನಲ್ಲಿ 7 ಕಂಟೈನ್ ಮೆಂಟ್ ವಲಯಗಳನ್ನು ಗುರುತಿಸಲಾಗಿದೆ. 

ಶುಕ್ರವಾರ ಬೆಳ್ತಂಗಡಿಯ ಕಲ್ಲಗುಡ್ಡದಲ್ಲಿ 26 ಹೊಸ ಕೋವಿಡ್ ಪಾಸಿಟಿವ್ ಕೇಸ್ ಗಳು ವರದಿಯಾಗಿವೆ.ಏಪ್ರಿಲ್ ಮಧ್ಯ ಭಾಗದಿಂದ ಜಿಲ್ಲೆಯಲ್ಲಿ ಕೋವಿಡ್ ಕೇಸ್ ಸಂಖ್ಯೆ ಹೆಚ್ಚುತ್ತಿವೆ ಎಂದು ದಕ್ಷಿಣ ಕನ್ನಡ  ನೋಡಲ್ ಅಧಿಕಾರಿ ಡಾ. ಅಶೋಕ್ ತಿಳಿಸಿದ್ದಾರೆ.

ಕಂಟೈನ್ ಮೆಂಟ್ ವಲಯಗಳಲ್ಲಿನ ಜನರಿಗೆ ಅಗತ್ಯ ಸೇವೆ ದೊರೆಯುವಂತೆ ನೋಡಿಕೊಳ್ಳಲು ಜಿಲ್ಲಾ ಆರೋಗ್ಯ ಇಲಾಖೆ ಗ್ರಾಮ ಪಂಚಾಯಿತಿಗಳು ಮತ್ತು ನಗರ ನಿಗಮಕ್ಕೆ ನಿರ್ದೇಶನ ನೀಡಿದೆ. 

ಎಂಪಿ ಡಬ್ಲ್ಯೂ ಮತ್ತು ಆಶಾ ಕಾರ್ಯಕರ್ತೆಯರಿಗೆ ಪ್ರತಿದಿನವೂ ಪಾಸಿಟಿವ್ ಪ್ರಕರಣಗಳು ಮತ್ತು ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳ ಬಗ್ಗೆ ನಿಗಾ ಇಡಲು ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆಗೆ ತಡೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹತೆ ರದ್ದು!

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ