ಲಕ್ಷ್ಮಣ ಸವದಿ 
ರಾಜ್ಯ

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಆಕ್ಸಿಜನ್ ಬಸ್ ಸೇವೆ ವಿಸ್ತಾರ: ಪ್ರಾರಂಭಿಕವಾಗಿ ನಾಳೆಯಿಂದ ಚಿಕ್ಕಮಗಳೂರಿನಲ್ಲಿ ಸೇವೆ ಆರಂಭ

ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆಎಸ್ಆರ್ ಟಿಸಿಯು ಸ್ವಯಂ ಸೇವಾ ಸಂಸ್ಥೆಗಳ  ಸಹಭಾಗಿತ್ವದಲ್ಲಿ ನಾಳೆಯಿಂದ (ಸೋಮವಾರ) ಬಸ್ಸಿನಲ್ಲಿಯೇ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದೆ. ಇದರಿಂದಾಗಿ ಹೊಸ ರೋಗಿಗಳು ಆಸ್ಪತ್ರೆಗೆ ಬಂದಾಗ ಅವರಿಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ನೀಡುವುದು ವಿಳಂಬವಾಗಿ ತೀವ್ರ ತೊಂದರೆಯಾಗುತ್ತಿದೆ. ಅಷ್ಟೇ ಅಲ್ಲ, ಆಸ್ಪತ್ರೆಯಲ್ಲಿ ಸ್ಥಳಾಭಾವದಿಂದ ರೋಗಿಗಳಿಗೆ ಅಲ್ಲಿ ಕುಳಿತು  ಕಾಯುವುದಕ್ಕೂ ಕಷ್ಟವಾಗುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಉಚಿತವಾಗಿ ಬಸ್ಸಿನಲ್ಲಿಯೇ ತುರ್ತು ಆಕ್ಸಿಜನ್ ಸೌಲಭ್ಯ ಒದಗಿಸಲು ಈ ನೂತನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಆಕ್ಸಿಜನ್ ಪೂರೈಸಲು ಅನುಕೂಲವಾಗುವಂತೆ ವಿಶೇಷವಾಗಿ ವಿನ್ಯಾಸಗೊಳಿಸಿರುವ ಈ ಕೆ.ಎಸ್. ಆರ್. ಟಿ. ಸಿ. ಬಸ್ಸನ್ನು ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನಿಲ್ಲಿಸಲಾಗುವುದು. ಹೊರಗಿನಿಂದ ಕೋವಿಡ್ ಪೀಡಿತರು ಬಂದಾಗ ತಕ್ಷಣಕ್ಕೆ ಆಸ್ಪತ್ರೆಯ ಒಳಗೆ ಆಕ್ಸಿಜನ್ ಸಿಗದಿದ್ದರೆ ಆತಂಕ ಪಡದೇ ಈ  ಆಕ್ಸಿಜನ್ ಮೊಬೈಲ್ ಬಸ್ಸಿನಲ್ಲಿಯೇ ತುರ್ತಾಗಿ ವಿಶ್ರಮಿಸಿ ಅಗತ್ಯ ಆಕ್ಸಿಜನ್ ಪಡೆದುಕೊಳ್ಳಲು ಸಾಧ್ಯವಾಗುವಂತೆ ವೈದ್ಯಕೀಯ ಉಪಕರಣಗಳನ್ನು ಇದರಲ್ಲಿ ಅಳವಡಿಸಲಾಗಿದೆ.

ಕೆಎಸ್ಆರ್ ಟಿಸಿಯ ಈ ನೂತನ ಸೇವೆಯನ್ನು ಖಾಸಗಿ ಸಂಸ್ಥೆಗಳಾದ ನಾಯೋನಿಕ ಐ ಕೇರ್ ಟ್ರಸ್ಟ್, ಸಿಟ್ರಿಕ್ ಇಂಡಿಯಾ ಮತ್ತು ಜಿಲ್ಲಾ ಆಡಳಿತಗಳ ಸಹಯೋಗದಿಂದ ಪ್ರಾರಂಭಿಸಲಾಗುತ್ತಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Nepal: ಸಾಮಾಜಿಕ ಮಾಧ್ಯಮ ಬ್ಯಾನ್ ವಿರುದ್ಧ ಪ್ರತಿಭಟನೆ; ಯುವಕರ ಮೇಲೆ ಪೊಲೀಸರ ಗುಂಡು; 19 ಮಂದಿ ಸಾವು; ಸೇನೆ ನಿಯೋಜನೆ; Video!

ಏಪ್ರಿಲ್ 1 ರಿಂದ ಕರ್ನಾಟಕದಲ್ಲಿ ಮಳೆಗೆ 111 ಸಾವು: ಸಿಎಂ ಸಿದ್ದರಾಮಯ್ಯ

Bihar SIR: Aadhaar ಅನ್ನು '12ನೇ ದಾಖಲೆ'ಯಾಗಿ ಪರಿಗಣಿಸಿ: EC ಗೆ ಸುಪ್ರೀಂ ಕೋರ್ಟ್ ಸೂಚನೆ

ಜಮ್ಮು-ಕಾಶ್ಮೀರ: ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ದೋಡಾದಲ್ಲಿ ಎಎಪಿ ಶಾಸಕ ಮೆಹರಾಜ್ ಮಲಿಕ್ ಬಂಧನ

Sagara: ಗಣೇಶ ಮೆರವಣಿಗೆ ಮೇಲೆ ಉಗುಳಿದ ಬಾಲಕರು.. ಕ್ಷಮೆಯಾಚಿಸಿದ ತಾಯಿ! Video

SCROLL FOR NEXT