ಬಾಗಲಕೋಟೆ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಮೈನುದ್ದೀನ್ ನಬಿವಾಲೆ ಕೊರೋನಾಗೆ ಬಲಿ
ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಮೈನುದ್ದೀನ್ ನಬಿವಾಲೆ (57) ಕೋವಿಡ್ ಗೆ ಬಲಿಯಾಗಿದ್ದಾರೆ.
ಬಾಗಲಕೋಟೆ: ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಮೈನುದ್ದೀನ್ ನಬಿವಾಲೆ (57) ಕೋವಿಡ್ ಗೆ ಬಲಿಯಾಗಿದ್ದಾರೆ.
ಕೋವಿಡ್ ಸೋಂಕಿಗೆ ತುತ್ತಾಗಿ 10 ದಿನಗಳ ಹಿಂದೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ನಬಿವಾಲೆ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಇದರಂತೆ ಇಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಅವರು ಕೊನೆಯುಸಿರೆಳೆದರು.
ನಬಿವಾಲೆ ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯರು ಇದ್ದಾರೆ. ನವನಗರದ ಖಬರಸ್ಥಾನದಲ್ಲಿ ಅಂತ್ಯಕ್ರಿಯೆ ನೆರವೇರಿತು.
ಬಾಗಲಕೋಟೆಯ ಮುಸ್ಲಿಂ ಸಮಾಜದ ಪ್ರಮುಖರಾಗಿದ್ದ ಮೈನುದ್ದೀನ್ ನಬಿವಾಲೆ, ಈ ಹಿಂದೆ ಬಾಗಲಕೋಟೆ ಅಂಜುಮನ್ ಸಂಸ್ಥೆಯ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.