ಎಚ್. ಡಿ. ಕುಮಾರಸ್ವಾಮಿ 
ರಾಜ್ಯ

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಔಷಧದ ಕೊರತೆ - ಕುಮಾರಸ್ವಾಮಿ

ರಾಜ್ಯ ಬ್ಲ್ಯಾಕ್ ಫಂಗಸ್ ಔಷಧದ ಕೊರತೆ ಎದುರಿಸುತ್ತಿರುವುದು ಬಹಿರಂಗವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ರಾಜ್ಯ ಬ್ಲ್ಯಾಕ್ ಫಂಗಸ್ ಔಷಧದ ಕೊರತೆ ಎದುರಿಸುತ್ತಿರುವುದು ಬಹಿರಂಗವಾಗಿದೆ ಎಂದು ಮಾಜಿ ಮುಖ್ಯಮಂತ್ರಿ
ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ,  ಕಪ್ಪು ಶಿಲೀಂಧ್ರದ ಸಮಸ್ಯೆಯು ಪಿಡುಗಾಗಿ, ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಅದರ ಚಿಕಿತ್ಸೆಗೆ ಅಗತ್ಯವಿರುವ Liposomal Amphotericin B ಔಷಧ ಕೊರತೆಯನ್ನು ಕರ್ನಾಟಕ ಎದುರಿಸುತ್ತಿರುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಔಷಧದ  1,050 ವಾಯ್ಲ್‌ಗಳು (ಶೀಶೆ) ಮಾತ್ರ ಇವೆ ಎಂಬ ಆಘಾತಕಾರಿ ಅಂಶವು ಭಯ ಸೃಷ್ಟಿಸಿದೆ ಎಂದಿದ್ದಾರೆ.

Liposomal Amphotericin B ಔಷಧಿಯ 20,000 ವಯಲ್‌ಗಳನ್ನು ಶೀಘ್ರವೇ ಪೂರೈಕೆ ಮಾಡುವಂತೆ ರಾಜ್ಯ ಔಷಧ ಉಗ್ರಾಣ
ಕೇಂದ್ರ ಕೇಂದ್ರ ಸರ್ಕಾರವನ್ನು ಕೋರಿದೆ. ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮೇಲೆ ಒತ್ತಡ ತಂದು ಅಗತ್ಯ ಪ್ರಮಾಣದ ಔಷಧಗಳನ್ನು ತರಿಸಿಕೊಳ್ಳುವುದರತ್ತ ಗಮನಹರಿಸಬೇಕು.ಇಲ್ಲವಾದಲ್ಲಿ ಮತ್ತೊಂದು ಭೀಕರತೆಗೆ ಜನ ಸಿಲುಕುವ ಅಪಾಯವಿದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. 

ಇದು ಸಂದಿಗ್ಧ ಕಾಲದ ಸೂಕ್ತ ಸಲಹೆ ಎಂದು ಎಲ್ಲರೂ ಭಾವಿಸಿಕೊಳ್ಳಬೇಕು. ಹಲವು ದಿನಗಳಿಂದ ಸರ್ಕಾರಕ್ಕೆ ನೀಡಿದ ಸಲಹೆಗಳನ್ನು
ಕೆಲ ಕಿಡಿಗೇಡಿಗಳು 'ರಾಜಕೀಯ'ವೆಂದು ಭಾವಿಸಿದ್ದಾರೆ. ಪಿಡುಗೊಂದು ಕಾಡುವಾಗ 'ಹಿಂದೆಂದೂ ನೋಡಿರದಷ್ಟು ಜನಸ್ತೋಮ' ಸೇರಿಸಿ ರ‍್ಯಾಲಿ ಮಾಡಿದ್ದು,  ಜನರನ್ನು ಕಂಡು ಉದ್ಘಾರಿಸಿದ್ದು ನಾವಲ್ಲ ಎಂಬುದು ಅರಿವಲ್ಲಿರಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ

ಸುಪ್ರೀಂಕೋರ್ಟ್​ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!