ಆಕ್ಸಿಜನ್ ಪೂರೈಕೆ ವ್ಯವಸ್ಥೆ 
ರಾಜ್ಯ

ಕುಂದಾಪುರದಲ್ಲಿ ಜಿಎಐಎಲ್‍ ನಿಂದ ಆಮ್ಲಜನಕ ಘಟಕ ನಿರ್ಮಾಣ

ವೈದ್ಯಕೀಯ ಆಮ್ಲಜನಕ ಲಭ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯ ಕುಂದಾಪುರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹಾಗೂ ದೇಶದ ಇತರ 9 ಸ್ಥಳಗಳಲ್ಲಿ ಆಮ್ಲಜನಕ ಘಟಕಗಳನ್ನು ನಿರ್ಮಿಸಲಾಗುವುದು ಎಂದು ಭಾರತೀಯ ಅನಿಲ ಪ್ರಾಧಿಕಾರ (ಜಿಎಐಎಲ್‍) ತಿಳಿಸಿದೆ.

ಉಡುಪಿ: ವೈದ್ಯಕೀಯ ಆಮ್ಲಜನಕ ಲಭ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯ ಕುಂದಾಪುರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹಾಗೂ ದೇಶದ ಇತರ 9 ಸ್ಥಳಗಳಲ್ಲಿ ಆಮ್ಲಜನಕ ಘಟಕಗಳನ್ನು ನಿರ್ಮಿಸಲಾಗುವುದು ಎಂದು ಭಾರತೀಯ ಅನಿಲ ಪ್ರಾಧಿಕಾರ (ಜಿಎಐಎಲ್‍) ತಿಳಿಸಿದೆ.

ಪ್ರೆಷರ್ ಸ್ವಿಂಗ್ ಅಡ್ಸಾರ್ಬ್‍ ಷನ್‍ (ಪಿಎಸ್‍ಎ) ವೈದ್ಯಕೀಯ ಆಮ್ಲಜನಕ ಸ್ಥಾವರ ನಿರ್ಮಾಣದ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ. ಘಟಕಕ್ಕೆ ಜಮೀನು ಗುರುತಿಸಲಾಗಿದೆ. ಜೂನ್‍ ಅಂತ್ಯ ಇಲ್ಲವೇ ಜುಲೈನಲ್ಲಿ ಘಟಕ ಕಾರ್ಯಾರಂಭ ಮಾಡಲಿದೆ ಎಂದು ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಕೋವಿಡ್ ನೋಡಲ್‍  ಅಧಿಕಾರಿ ಡಾ ನಾಗೇಶ್‍ ಕುಂದಾಪುರ ತಿಳಿಸಿದ್ದಾರೆ.

ಈ ಘಟಕ ಪ್ರತಿ ನಿಮಿಷಕ್ಕೆ 500 ಲೀಟರ್ ಆಮ್ಲಜನಕ ಉತ್ಪಾದಿಸಲಿದ್ದು, ದಿನಕ್ಕೆ 100 ಬೃಹತ್ ಸಿಲಿಂಡರ್ ಗಳನ್ನು ತುಂಬುವ ಸಾಮರ್ಥ್ಯ ಹೊಂದಲಿದೆ. ಒಂದು ಬೃಹತ್ ಸಿಲಿಂಡರ್ ನಲ್ಲಿ 7,000 ಲೀಟರ್ ಆಮ್ಲಜನಕವನ್ನು ತುಂಬಬಹುದಾಗಿದೆ. ಆದ್ದರಿಂದ ಮುಂದಿನ ತಿಂಗಳಿನಿಂದ ತಾಲ್ಲೂಕಿನಲ್ಲಿ ಅಗತ್ಯ ಆಮ್ಲಜನಕ  ಲಭ್ಯವಿರಲಿದೆ ಎಂದು ಅವರು ಹೇಳಿದ್ದಾರೆ. 

ಈ ಹಿಂದೆ ಇದೇ ವಿಚಾರವಾಗಿ ಮಾತನಾಡಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರು, ರಾಜ್ಯದ 28 ಜಿಲ್ಲೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ತೆರೆಯಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಈ ಎಲ್ಲಾ ಘಟಕಗಳು ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಸಹಯೋಗದಲ್ಲಿ ನಿರ್ಮಾಣವಾಗಲಿವೆ.  

ಉಡುಪಿಯ ಜಿಲ್ಲೆಯಲ್ಲಿ ಕುಂದಾಪುರ ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಜಿಎಐಎಲ್ ಸಂಸ್ಥೆಯು ನಿರ್ಮಿಸಲಿದೆ. ಚಿಕ್ಕಮಗಳೂರಿನ ಜಿಲ್ಲಾಆಸ್ಪತ್ರೆಯ ಆವರಣದಲ್ಲಿ ಸಿಪಿಸಿಎಲ್ (ಚೆನ್ನೈ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್) ಸಂಸ್ಥೆಯು ಆಮ್ಲಜನಕ ಘಟಕ ನಿರ್ಮಿಸಲಿದೆ  ಎಂದು ಪ್ರಕಟಣೆಯಲ್ಲಿ ತಿಳಿಸಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ