ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜ್ಯ

ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿಎಸ್ ವೈ ಸೂಚನೆ

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಆದ್ಯತೆ  ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಆದ್ಯತೆ  ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಕೋವಿಡ್-19 ವಿಷಯಕ್ಕೆ ಸಂಬಂಧಿಸಿದಂತೆ  ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್  ಸಿಇಒ, ಎಸ್ ಪಿ ಹಾಗೂ ಡಿಹೆಚ್ ಒ ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕರುಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ, ಪರೀಕ್ಷಾ ವರದಿಗಳನ್ನು 24 ಗಂಟೆಯೊಳಗೆ ನೀಡಲು ಕ್ರಮ ವಹಿಸಬೇಕು.  ಗ್ರಾಮೀಣ ಪ್ರದೇಶದಲ್ಲಿ ಹೋಮ್ ಐಸೋಲೇಷನ್ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ನಿರ್ದೇಶಿಸಿದರು. 

ಮನೆ ಮನೆ ಭೇಟಿ ಹಾಗೂ ಫೋನ್ ಟ್ರಯಾಜಿಂಗ್ ಮೂಲಕ ಸೋಂಕಿತ ವರ್ಗೀಕರಣವನ್ನು ತ್ವರಿತವಾಗಿ ನಡೆಸಬೇಕು, ಹೋಮ್ ಐಸೊಲೇಷನ್‍ನಲ್ಲಿ ಇರುವವರಿಗೆ ಮೆಡಿಕಲ್ ಕಿಟ್ ಒದಗಿಸಲು ಔಷಧಿ ಕೊರತೆಯಾದಲ್ಲಿ ಸ್ಥಳೀಯವಾಗಿ ಖರೀದಿಸಿ, ಒದಗಿಸಬೇಕು, ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳಲ್ಲಿ ಕೋವಿಡ್ ನಿರ್ವಹಣೆಗೆ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.

ಹೆಚ್ಚುತ್ತಿರುವ ಸೋಂಕಿತರನ್ನು ರೋಗಲಕ್ಷಣದ ತೀವ್ರತೆಗೆ ಅನುಗುಣವಾಗಿ ಚಿಕಿತ್ಸಾ ವಿಧಾನವನ್ನು ನಿರ್ಧರಿಸುವ ಮೂಲಕ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಳ್ಳಬೇಕಾಗಿದೆ. ತುರ್ತು ಚಿಕಿತ್ಸೆ ಅಗತ್ಯವಿರುವವರಿಗೆ ಸಕಾಲದಲ್ಲಿ ಚಿಕಿತ್ಸೆಯನ್ನು ಖಾತರಿ ಪಡಿಸುವಂತೆ ಸೂಚಿಸಲಾಯಿತು. ಅಗತ್ಯಕ್ಕೆ ತಕ್ಕಂತೆ  ಕೋವಿಡ್ ಕೇರ್ ಸೆಂಟರುಗಳು, ತಾತ್ಕಾಲಿಕ ಆಸ್ಪತ್ರೆಗಳನ್ನು  ಸ್ಥಾಪಿಸಲು ಸ್ಥಳ ಗುರುತಿಸಿ, ಅಗತ್ಯ ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT