ಸಾಂದರ್ಭಿಕ ಚಿತ್ರ 
ರಾಜ್ಯ

ತೌಕ್ತೆ ಚಂಡಮಾರುತ: ರಾಜ್ಯದಲ್ಲಿ 8 ಮಂದಿ ಸಾವು, ಕರಾವಳಿ- ಮಲೆನಾಡಿನಲ್ಲಿ ವ್ಯಾಪಕ ಹಾನಿ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಾಳಿಯಿಂದ ಕೂಡಿದ ತೌಕ್ತೆ ಚಂಡಮಾರುತವು ಎಂಟು ಜನರನ್ನು ಬಲಿ ತೆಗೆದುಕೊಂಡಿದೆ.

ಮಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಾಳಿಯಿಂದ ಕೂಡಿದ ತೌಕ್ತೆ ಚಂಡಮಾರುತವು ಎಂಟು ಜನರನ್ನು ಬಲಿ ತೆಗೆದುಕೊಂಡಿದೆ.

ದುರ್ಘಟನೆಯೊಂದರಲ್ಲಿ ಮಂಗಳೂರು ಕರಾವಳಿಯ ಸಮುದ್ರದಲ್ಲಿ ಶನಿವಾರ ಅಲೆಯೆನ್ಸ್ ಹೆಸರಿನ ದೋಣಿ ಮುಳುಗಿದ್ದು, ಸ್ಥಳೀಯರು ಮೂವರನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಇತರ ಮೂವರು ನಾಪತ್ತೆಯಾಗಿದ್ದಾರೆ.

ಕೋರಮಂಡಲ್‍ ಹೆಸರಿನ ದೋಣಿಯಲ್ಲಿದ್ದ 9 ಜನರ ರಕ್ಷಣೆಗಾಗಿ ಸೋಮವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ಆಗಮಿಸಿತ್ತು. ಈ ದೋಣಿ ಮುಲ್ಕಿ ಕರಾವಳಿಯಿಂದ ನಾಲ್ಕು ಮೈಲು ದೂರದಲ್ಲಿ ಸಮುದ್ರದೊಳಗೆ ಬಂಡೆಗಳಲ್ಲಿ ಸಿಲುಕಿಕೊಂಡಿತ್ತು ಎಂದು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. 

ರಕ್ಷಣಾ ಕಾರ್ಯಾಚರಣೆ ಸೋಮವಾರ ಆರಂಭವಾಗಿದೆ. ಕರಾವಳಿ ರಕ್ಷಣಾ ಪಡೆಯ ಐಎನ್‍ಎಸ್‍ ವರಹಾ ನೌಕೆ ಮುಲ್ಕಿ ಬಂಡೆಗಳಿಂದ ಕೇವಲ 500 ಮೀಟರ್ ದೂರದಲ್ಲಿದ್ದು, ಪರಿಸ್ಥಿತಿಯನ್ನು ನಿಕಟವಾಗಿ ಪರಿಶೀಲಿಸಲಾಗುತ್ತಿದೆ.

ಈ ಮಧ್ಯೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆ ನಿಂತಿದೆ. ತೌಕ್ತೆ ಚಂಡಮಾರುತದ ಪರಿಣಾಮ ಈ ತಿಂಗಳ 20ರವರೆಗೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಘಟಕ ತಿಳಿಸಿದೆ.

ಚಂಡಮಾರುತದಿಂದ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ರಸ್ತೆಗಳು, ಮನೆಗಳು ಮತ್ತು ಇತರ ಕಟ್ಟಡಗಳಿಗೆ ವ್ಯಾಪಕ ಹಾನಿಯಾಗಿದೆ. ಜಿಲ್ಲೆಯಲ್ಲಿ ಶನಿವಾರದಿಂದ ಭಾರಿ ಮಳೆಯಾಗುತ್ತಿತ್ತು. ನದಿ ಹಾಗೂ ಕಾಲುವೆಗಳು ತುಂಬಿ ಹರಿಯುತ್ತಿವೆ. ಕಾಡನೂರು ಮತ್ತು ಬೇತ್ರಿಯಲ್ಲಿ ಕಾವೇರಿ ನದಿ ನೀರಿನ ಮಟ್ಟ ಗಣನೀಯ ಹೆಚ್ಚಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಕಳೆದ 24 ತಾಸಿನಲ್ಲಿ 14 ಮನೆಗಳು ಹಾನಿಗೊಂಡಿದ್ದು, 108 ಮನೆಗಳು ಭಾಗಶಃ ಹಾನಿಗೊಂಡಿವೆ. ತಗ್ಗು ಪ್ರದೇಶಗಳ 380 ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.ಈ ಕೇಂದ್ರಗಳಲ್ಲಿ ಎಲ್ಲರಿಗೂ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಯಾರೊಬ್ಬರಿಗಾದರೂ ಕೋವಿಡ್ ಸೋಂಕು ದೃಢಪಟ್ಟರೆ ಅಂತವರನ್ನು ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಸ್ಥಳಾಂತರಿಸಲಾಗುದ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT