ಡಾ ಕೆ ಸುಧಾಕರ್ 
ರಾಜ್ಯ

ಬ್ಲ್ಯಾಕ್ ಫಂಗಸ್ ಸೋಂಕು ಬಂದರೆ ಸರ್ಕಾರಕ್ಕೆ ಮಾಹಿತಿ ನೀಡಿ: ಸಚಿವ ಡಾ. ಕೆ.ಸುಧಾಕರ್

ರಾಜ್ಯದಲ್ಲಿ ಯಾರಿಗೇ ಬ್ಲ್ಯಾಕ್ ಫಂಗಸ್ ಸೋಂಕು ಬಂದರೆ ಸರ್ಕಾರಕ್ಕೆ ಮಾಹಿತಿ ನೀಡಬೇಕು. ಇದನ್ನು ಮುಚ್ಚಿಟ್ಟರೆ ಕಾನೂನು ಬಾಹಿರವಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬೆಂಗಳೂರು: ರಾಜ್ಯದಲ್ಲಿ ಯಾರಿಗೇ ಬ್ಲ್ಯಾಕ್ ಫಂಗಸ್ ಸೋಂಕು ಬಂದರೆ ಸರ್ಕಾರಕ್ಕೆ ಮಾಹಿತಿ ನೀಡಬೇಕು. ಇದನ್ನು ಮುಚ್ಚಿಟ್ಟರೆ ಕಾನೂನು ಬಾಹಿರವಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬ್ಲ್ಯಾಕ್ ಫಂಗಸ್ ಕುರಿತು ವಿವಿಧ ವಿಭಾಗಗಳ ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.

ಬ್ಲ್ಯಾಕ್ ಫಂಗಸ್ ಕೆಲವರಲ್ಲಿ ಕಾಣಿಸಿಕೊಂಡಿದೆ. ಆದರೆ ಕೋವಿಡ್ ನಂತೆ ಈ ಸೋಂಕು ಹರಡುತ್ತದೆ ಎಂಬುದು ಸುಳ್ಳು. ಇದು ಕೊರೊನಾಗೆ ಸಮನಾದ ರೋಗವಲ್ಲ. ಕೋವಿಡ್ ಗೆ ಒಳಗಾದ ಅತಿಯಾದ ಮಧುಮೇಹವಿರುವವರು ಅಧಿಕ ಸ್ಟೀರಾಯಿಡ್ ಔಷಧಿ ಪಡೆಯುವವರಿಗೆ ಇದು ಬರುತ್ತದೆ. ಎಚ್ ಐವಿ, ಕ್ಯಾನ್ಸರ್, ಅಂಗಾಂಗ ಕಸಿ ಮಾಡಿಕೊಂಡಿರುವವರಿಗೆ ಬರುವ ಸಾಧ್ಯತೆ ಇರುತ್ತದೆ. ಇಂತಹವರನ್ನು ಎಚ್ಚರಿಕೆಯಿಂದ ನೋಡಿಕೊಳ್ಳಬೇಕು ಎಂದರು.

ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಶಿಲೀಂಧ್ರ ದಾಳಿ ಮಾಡಿ ಮೂಗಿಗೆ ಬರುತ್ತದೆ. ನಂತರ ಕಣ್ಣಿಗೆ ಹಾನಿ ಮಾಡುತ್ತದೆ. ಮೂಗಿಗೆ ಬಂದ ಕೂಡಲೇ ಎಚ್ಚರ ವಹಿಸಿ ಚಿಕಿತ್ಸೆ ಪಡೆಯಬೇಕು. ಆಸ್ಪತ್ರೆಗಳಲ್ಲಿ ಹ್ಯುಮಿಡಿಫೈರ್ ನಲ್ಲಿ ನಲ್ಲಿ ನೀರನ್ನು ಬಳಸುವುದರಿಂದ ಬರುತ್ತಿದೆ ಎಂಬ ಅಂದಾಜಿದೆ. ಇದು ಯಾವ ಮೂಲದಿಂದ ಬರುತ್ತಿದೆ ಎಂದು ಪತ್ತೆ ಮಾಡಲು ತಜ್ಞರಿಗೆ ಸೂಚಿಸಲಾಗಿದೆ. ಈ ಬಗ್ಗೆ ತಜ್ಞರು ವರದಿ ಸಲ್ಲಿಸಲಿದ್ದು, ವರದಿ ಆಧಾರದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುವುದು ಎಂದರು.

ಬೌರಿಂಗ್ ನಲ್ಲಿ ಚಿಕಿತ್ಸೆ

ಬ್ಲ್ಯಾಕ್ ಫಂಗಸ್ ಗೆ ಆಂಪೊಟೆರಿಸಿನ್ ಔಷಧಿ ನೀಡುತ್ತಿದ್ದು, ಒಬ್ಬ ರೋಗಿಗೆ 40-60 ವೈಲ್ ಗಳು ಬೇಕಾಗುತ್ತವೆ. ಕೇಂದ್ರ ಸರ್ಕಾರ ರಾಜ್ಯಕ್ಕೆ 1,050 ರಷ್ಟು ವೈಲ್ ಗಳ ಮಂಜೂರಾತಿ ನೀಡಿದ್ದು, 450 ವೈಲ್ ಬಂದಿದೆ. ಜೊತೆಗೆ 20 ಸಾವಿರ ವೈಲ್ ಗೆ ಆದೇಶಿಸಲಾಗಿದೆ. ನಿನ್ನೆವರೆಗೆ 97 ಜನರಲ್ಲಿ ಈ ಸೋಂಕು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದರು. ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ಮೆಡಿಕಲ್ ಕಾಲೇಜು, ಶಿವಮೊಗ್ಗ ಮೆಡಿಕಲ್ ಕಾಲೇಜು, ಕಲಬುರ್ಗಿ ಜಿಮ್ಸ್, ಹುಬ್ಬಳ್ಳಿ ಕಿಮ್ಸ್, ಮಂಗಳೂರು ವೆನ್ ಲಾಕ್, ಉಡುಪಿ ಕೆಎಂಸಿ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಆಯಾ ಜಿಲ್ಲೆಗಳ ಜನರು ಅಲ್ಲಿಯೇ ಚಿಕಿತ್ಸೆ ಪಡೆಯಬಹುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!