ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾಗೆ 468 ಬಲಿ, ಬೆಂಗಳೂರಿನಲ್ಲಿ 11,772 ಸೇರಿ 34,281 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಬುಧವಾರ ಒಂದೇ ದಿನ ಬರೋಬ್ಬರಿ 468 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 23306ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 34,281 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 23,06,665ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 11,772 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 10,84,844ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 218 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 49953 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 17,24,438ಕ್ಕೆ ಏರಿಕೆಯಾಗಿದೆ. ಇನ್ನು 5,58,890 ಸಕ್ರೀಯ ಪ್ರಕರಣಗಳಿವೆ.

SCROLL FOR NEXT