ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ 
ರಾಜ್ಯ

ಲಾಕ್ ಡೌನ್ ವಿಸ್ತರಣೆ ಕುರಿತು ಮೇ 23ಕ್ಕೆ ತೀರ್ಮಾನ: ಮುಖ್ಯಮಂತ್ರಿ ಯಡಿಯೂರಪ್ಪ

ಕೋವಿಡ್-2ನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಹೇರಿರುವ ಈಗ ಹೇರಿರುವ ಲಾಕ್ ಡೌನ್ ಮೇ 24ಕ್ಕೆ ಮುಗಿಯಲಿದ್ದು ಅದನ್ನು ವಿಸ್ತರಿಸುವ ಕುರಿತು 23ಕ್ಕೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು: ಕೋವಿಡ್-2ನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಹೇರಿರುವ ಈಗ ಹೇರಿರುವ ಲಾಕ್ ಡೌನ್ ಮೇ 24ಕ್ಕೆ ಮುಗಿಯಲಿದ್ದು ಅದನ್ನು ವಿಸ್ತರಿಸುವ ಕುರಿತು 23ಕ್ಕೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಸುದ್ದಿಗಾರರಿಗೆ ಈ ಕುರಿತು ಪ್ರತಿಕ್ರಿಯಿಸಿದ ಅವರು, ಈಗಾಗಲೇ ಹೇರಿರುವ ಲಾಕ್ ಡೌನ್ ನಿಂದ ಯಾವ ಮಟ್ಟಿಗೆ ಬೆಂಗಳೂರು ನಗರ ಸೇರಿದಂತೆ ಜಿಲ್ಲೆಗಳಲ್ಲಿ ಪರಿಣಾಮ ಬೀರಿದೆ, ಮುಂದೆ ಏನು ಅಗತ್ಯ ಕ್ರಮಗಳನ್ನು ತೆಗೆದುಕೊಂಡರೆ ಉತ್ತಮ ಎಂದು ಸಚಿವರು, ಅಧಿಕಾರಿಗಳೊಂದಿಗೆ 23ರಂದು ಸಭೆ ನಡೆಸಿ ತೀರ್ಮಾನಕ್ಕೆ ಬರುತ್ತೇನೆ ಎಂದು ಹೇಳಿದರು.

ಈಗ ಸಾಧ್ಯವಾದಷ್ಟು ಮಟ್ಟಿಗೆ ಸರ್ಕಾರದ ಇತಿಮಿತಿಯಲ್ಲಿ ಆರ್ಥಿಕ ಪರಿಹಾರ ಪ್ಯಾಕೇಜ್ ಗಳನ್ನು ಘೋಷಣೆ ಮಾಡಿದ್ದೇವೆ, ಮುಂದಿನ ದಿನಗಳಲ್ಲಿ ಏನು ಮಾಡಬೇಕೆಂದು ತೀರ್ಮಾನ ಮಾಡುತ್ತೇವೆ ಎಂದರು.

ಕೋವಿಡ್ ನಿಂದ ಪೋಷಕರಿಬ್ಬರೂ ಮೃತಪಟ್ಟು ಅನಾಥರಾಗಿರುವ ಮಕ್ಕಳ ಆರೈಕೆಗೆ ವಿಶೇಷ ಪ್ಯಾಕೇಜ್ ಗಳನ್ನು ಬಿಡುಗಡೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಹ ಮುಖ್ಯಮಂತ್ರಿ ಇಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT