ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ 
ರಾಜ್ಯ

ರಾಜ್ಯದಲ್ಲೂ ಡಿಆರ್'ಡಿಒ ವತಿಯಿಂದ ಕೋವಿಡ್ ಕೇಂದ್ರ ಆರಂಭಿಸಲು ಸಹಾಯ ಮಾಡಿ: ರಾಜನಾಥ್ ಸಿಂಗ್'ಗೆ ಸವದಿ ಪತ್ರ

ಕರ್ನಾಟಕದಲ್ಲಿಯೂ ಕೂಡ ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಲು ಸಹಾಯ ಮಾಡುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಾರಿಗೆ ಸಚಿವ ಮತ್ತು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ದೇಶದ ನಾಲ್ಕು ಕಡೆಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಡಿಆರ್ ಡಿಒ  ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ತೆರೆದ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಕೂಡ ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಲು ಸಹಾಯ ಮಾಡುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಾರಿಗೆ ಸಚಿವ ಮತ್ತು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ಮನವಿ ಮಾಡಿಕೊಂಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಸವದಿಯವರು, ದೆಹಲಿ, ವಾರಣಾಸಿ, ಅಹಮದಾಬಾದ್, ಮತ್ತು ಲಖ್ನೋಗಳಲ್ಲಿ ಡಿಆರ್ ಡಿಒ  ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಿರುವುದಕ್ಕೆ ಅಭಿನಂದಿಸಿದ್ದಾರೆ.

ಅಲ್ಲದೆ, ಕರ್ನಾಟಕದಲ್ಲಿಯೂ ಪ್ರಸ್ತುತ ಕೋವಿಡ್ ಅಪಾಯಕಾರಿ ಪ್ರಮಾಣದಲ್ಲಿ ಹೆಚ್ಚಿರುವುದರಿಂದ ಇಲ್ಲಿನ ಆಸ್ಪತ್ರೆಗಳಲ್ಲಿ ರೋಗಿಗಳ ದಟ್ಟಣೆ ಅಧಿಕವಾಗಿದೆ. ವೈದ್ಯರುಗಳ ಮೇಲೆ ಒತ್ತಡವೂ ತೀವ್ರವಾಗಿದೆ. ಆದ್ದರಿಂದ ಕರ್ನಾಟಕದಲ್ಲಿಯೂ ಆದಷ್ಟು ಶೀಘ್ರವಾಗಿ ಸುಸಜ್ಜಿತ ಕೋವಿಡ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸುವುದು ಸೂಕ್ತ. ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಸ್ವಾಮ್ಯದಲ್ಲಿ ಸಾಕಷ್ಟು ಖಾಲಿ ಜಾಗಗಳೂ ಈಗ ಲಭ್ಯವಿದೆ. 

ಇದನ್ನು ಬಳಕೆ ಮಾಡಿಕೊಂಡು ರಕ್ಷಣಾ ಇಲಾಖೆಯಿಂದ ತಕ್ಷಣವೇ ಕೋವಿಡ್ ಕೇಂದ್ರಗಳನ್ನು ಪ್ರಾರಂಭಿಸಿದರೆ ಸಾಕಷ್ಟು ರೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಆದ್ಯತೆಯ ಮೇರೆಗೆ ಕ್ರಮಕೈಗೊಳ್ಳಬೇಕೆಂದು ಡಿಸಿಎಂ ಸವದಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ನೇಪಾಳದಲ್ಲಿ ಮತ್ತೆ ಪ್ರವಾಹ ಆತಂಕ; ಬುಧಿಗಂಡಕಿ ನದಿ ತೀರದಲ್ಲಿ ಹೈ ಅಲರ್ಟ್, ಆಗಿದ್ದೇನು?

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

Maruti Suzuki Baleno ಹೊಸ ಆವೃತ್ತಿ ಬಿಡುಗಡೆ: ಬೆಲೆ, ಮೈಲೇಜ್, ವೈಶಿಷ್ಟ್ಯ: ಕಾರು ಖರೀದಿಸುವ ಮುನ್ನ ನೀವು ತಿಳಿಯಬೇಕಾದ ಅಂಶಗಳಿವು...