ರಾಜ್ಯ

ರಾಜ್ಯ ಸರ್ಕಾರ ಕೋವಿಡ್ ಪರೀಕ್ಷೆ ಕಡಿಮೆ ಮಾಡುವ ಮೂಲಕ ಮತ್ತೊಂದು ಅಲೆಯನ್ನು ಆಹ್ವಾನಿಸುತ್ತಿದೆ: ತಜ್ಞರ ಎಚ್ಚರಿಕೆ

Lingaraj Badiger

ಬೆಂಗಳೂರು: ಕರ್ನಾಟಕದಲ್ಲಿ ಒಂದು ತಿಂಗಳ ಹಿಂದೆ ಪ್ರತಿದಿನ 1.9 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿತ್ತು. ಈಗ ಅದನ್ನು ಕೇವಲ 93,000ಕ್ಕೆ ಇಳಿಸುವ ಮೂಲಕ ರಾಜ್ಯದಲ್ಲಿ ಮತ್ತೊಂದು ಕೊರೋನಾ ಅಲೆಯನ್ನುಆಹ್ವಾನಿಸಲಾಗುತ್ತಿದೆ ಎಂದು ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ(ಟಿಎಸಿ)ಯ ಸದಸ್ಯರೊಬ್ಬರು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ಸೋಮವಾರ 97,236 ಕೋವಿಡ್ ಪರೀಕ್ಷೆಗಳನ್ನು ನಡೆಸಿದ್ದು, ಅದರಲ್ಲಿ 38,603 ಮಂದಿಗೆ ಪಾಸಿಟಿವ್ ಬಂದಿದೆ. ಮಂಗಳವಾರ 93,247 ಪರೀಕ್ಷೆಗಳನ್ನು ನಡೆಸಲಾಗಿದ್ದು, 30,309 ಜನರಿಗೆ ಪಾಸಿಟಿವ್ ಬಂದಿದೆ.

ಇದು ಕಳೆದ ಏಪ್ರಿಲ್ 28 ರಂದು 1.72 ಲಕ್ಷ ಮತ್ತು ಏಪ್ರಿಲ್ 24 ರಂದು ನಡೆಸಿದ 1.9 ಲಕ್ಷ ಕೋವಿಡ್ ಪರೀಕ್ಷೆಗಳಿಗೆ ತದ್ವಿರುದ್ಧವಾಗಿದೆ ಎಂದಿದ್ದಾರೆ.

ಇನ್ನೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳದವರು ಸೋಂಕನ್ನು ಮತ್ತಷ್ಟು ಹರಡಬಹುದು ಎಂದು ಟಿಎಸಿ ಸದಸ್ಯ ಮತ್ತು ಭಾರತದ ಸಾರ್ವಜನಿಕ ಆರೋಗ್ಯ ಪ್ರತಿಷ್ಠಾನದ ಸಾಂಕ್ರಾಮಿಕ ರೋಗಶಾಸ್ತ್ರ ಪ್ರಾಧ್ಯಾಪಕ ಡಾ.ಗಿರಿಧರ ಆರ್ ಬಾಬು ಹೇಳಿದ್ದಾರೆ.

"ಒಂದು ರೀತಿಯಲ್ಲಿ ನಾವು ಮೂರನೇ ಅಲೆಯನ್ನು ಆಹ್ವಾನಿಸುತ್ತಿದ್ದೇವೆ. ಏಕೆಂದರೆ ಜನರು ಸೋಂಕನ್ನು ಹರಡುತ್ತಿದ್ದಾರೆ ಮತ್ತು ಅದು ವೇಗವಾಗಿ ಹರಡುತ್ತದೆ. ನಂತರ ಅದು ಹೆಚ್ಚು ಸೋಂಕಿಗೆ ಕಾರಣವಾಗುತ್ತದೆ ಮತ್ತು ನಾವು ಈ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ. ಇದಕ್ಕೆ ಇರುವ ಏಕೈಕ ಪರಿಹಾರವೆಂದರೆ ವ್ಯಾಪಕವಾಗಿ ಪರೀಕ್ಷಿಸುವುದು" ಎಂದು ಬಾಬು ಪಿಟಿಐಗೆ ತಿಳಿಸಿದ್ದಾರೆ.

ಪರೀಕ್ಷೆಗಳನ್ನು ಕಡಿಮೆ ಮಾಡುವುದು ಸರ್ಕಾರದ ವೆಚ್ಚ ಕಡಿತ ಕ್ರಮವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದುಹೋದ ಜೀವಗಳನ್ನು ಟೆಸ್ಟ್ ಕಿಟ್ ಬೆಲೆಗೆ ಹೋಲಿಸಲು ಸಾಧ್ಯವಿಲ್ಲ ಎಂದಿದ್ದಾರೆ.

SCROLL FOR NEXT