ಸಿಎಂ ಯಡಿಯೂರಪ್ಪ 
ರಾಜ್ಯ

ಲಾಕ್ಡೌನ್ ಸಂಕಷ್ಟ: ವಿವಿಧ ವರ್ಗದ ಜನರಿಗೆ ಇಂದು ಸಿಎಂ ಯಡಿಯೂರಪ್ಪ ಪ್ಯಾಕೇಜ್ ಘೋಷಣೆ ಸಾಧ್ಯತೆ

ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಿಸಲು ಲಾಕ್ಡೌನ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು, ಇದರ ನಡುವಲ್ಲೇ ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ ರಾಜ್ಯ ಸರ್ಕಾರ ಬುಧವಾರ ಪರಿಹಾರ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಿಸಲು ಲಾಕ್ಡೌನ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು, ಇದರ ನಡುವಲ್ಲೇ ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ ರಾಜ್ಯ ಸರ್ಕಾರ ಬುಧವಾರ ಪರಿಹಾರ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಕೋವಿಡ್ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ, ಮಹಿಳಾ ಸ್ವಸಹಾಯ ಸಂಘಗಳ ಸಾಲ ಹಾಗೂ ರೈತರ ಬೆಳೆ ಸಾಲದ ಕಂತಿನ ಮರುಪಾವತಿ ವಿಸ್ತರಣೆ ಮತ್ತಿತರ ನೆರವನ್ನು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಕಟಿಸುವ ಸಾಧ್ಯತೆಗಳಿವೆ. ಆದರೆ, ಯಾರಿಗೆ ಎಷ್ಟು ಪರಿಹಾರ ನೀಡಲಾಗುತ್ತದೆ ಎಂಬುದರ ಬಗ್ಗೆ ತಮ್ಮ ಸಂಪುಟದ ಹಿರಿಯ ಸಚಿವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಯಡಿಯೂರಪ್ಪ ಅವರು ಅಂತಿಮಗೊಳಿಸುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. 

ಈ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಸುದೀರ್ಘ ಚರ್ಚೆ ನಡೆಸಿದ್ದಾರೆ. 

ಕಳೆದ ಬಾರಿ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿದ್ದುದ್ದರಿಂದ ಹೆಚ್ಚಿನ ವರ್ಗಗಳಿಗೆ ಸುಮಾರು ಎರಡೂವರೆ ಕೋಟಿ ರುಪಾಯಿಗಳಷ್ಟು ಪರಿಹಾರ ಘೋಷಿಸಲಾಗಿತ್ತು. ಆದರೆ, ಈಗ ಪೂರ್ಣ ಲಾಕ್ಡೌನ್ ಜಾರಿಯಲ್ಲಿ ಇಲ್ಲ. ಸೆಮಿ ಲಾಕ್ಡೌನ್ ಇದೆ. ಹೀಗಾಗಿ ಎಲ್ಲಾ ವರ್ಗಗಳಿಗೂ ಪರಿಹಾರ ನೀಡುವ ಅಗತ್ಯವಿಲ್ಲ. 

ಮೇಲಾಗಿ ಕೋವಿಡ್'ನ ಮೊದಲ ಅಲೆಯಿಂದ ಆರ್ಥಿಕತೆ ಮೇಲಾಗಿರುವ ಹೊಡೆತದಿಂದ ಇನ್ನೂ ಸುಧಾರಿಸಿಕೊಂಡಿಲ್ಲ. ಅಗತ್ಯವಿರುವ ವರ್ಗಗಳಿಗೆ ಮಾತ್ರ ಪರಿಹಾರ ನೀಡುವುದು ಸೂಕ್ತ ಎಂಬ ಅಭಿಪ್ರಾಯವನ್ನು ಅಧಿಕಾರಿಗಳು ನೀಡಿದ್ದಾರೆ ಎನ್ನಲಾಗಿದೆ.

ಹೀಗಾಗಿ ಮುಖ್ಯಮಂತ್ರಿಗಳು ಬುಧವಾರ ಬೆಳಿಗ್ಗೆ ಆರ್ಥಿಕ ಅಧಿಕಾರಿಗಳ ಅಭಿಪ್ರಾಯವನ್ನು ಸಚಿವರ ಸಭೆಯಲ್ಲಿ ಇರಿಸಿ ಚರ್ಚಿಸಲಿದ್ದಾರೆ. ನಂತರ ಬೆಳಿಗ್ಗೆ 11.30ಕ್ಕೆ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಘೋಷಣೆ ಮಾಡಲಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT