ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ; ಮೂಲಸೌಕರ್ಯ ಹೆಚ್ಚಿಸಿ: ಸರ್ಕಾರಕ್ಕೆ ತಜ್ಞರ ಸಲಹೆ

ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಎದುರಿಸಲು ಪ್ರಸ್ತುತ ಅಸ್ತಿತ್ವದಲ್ಲಿರುವ ಮೂಲಸೌಕರ್ಯಗಳನ್ನು ಮತ್ತಷ್ಟು ಹೆಚ್ಚಿಸುವಂತೆ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ. 

ಬೆಂಗಳೂರು: ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಎದುರಿಸಲು ಪ್ರಸ್ತುತ ಅಸ್ತಿತ್ವದಲ್ಲಿರುವ ಮೂಲಸೌಕರ್ಯಗಳನ್ನು ಮತ್ತಷ್ಟು ಹೆಚ್ಚಿಸುವಂತೆ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ. 

ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ.ನವೀನ್ ಬೆನಕಪ್ಪ ಅವರು ಮಾತನಾಡಿ, ಯಾವುದೇ ಚಿಕಿತ್ಸೆ ಲಭ್ಯ ಸಿಗದಂತಾಗಬಾರದು. ಹೀಗಾಗಿ ಆಕ್ಸಿಜನ್, ಔಷಧಿ, ತುರ್ತು ಔಷಧಿಗಳು, ಎಚ್‌ಎಫ್‌ಎನ್‌ಸಿ (ಹೈ ಫ್ಲೋ ನಾಸಲ್ ಕ್ಯಾನುಲಾ), ಸಿಪಿಎಪಿ ಯಂತ್ರಗಳು, ವೆಂಟಿಲೇಟರ್‌  ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಹೇಳಿದ್ದಾರೆ. 

ಸೋಂಕು ತಗುಲಿದರೂ ಮಕ್ಕಳ ಆರೋಗ್ಯ ಉತ್ತಮವಾಗಿರುವ ಬೆಳವಣಿಗೆಗಳ ಕಂಡು ಬರುತ್ತಿವೆ. ಕೆಲವು ಪ್ರಕರಣಗಳಿಗೆ ಮಾತ್ರ ಐಸಿಯು ಅಗತ್ಯ ಬೀಳಲಿದೆ. ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲು ಮಕ್ಕಳಿಗೆಂದೇ ಪ್ರತ್ಯೇಕ ವಾರ್ಡ್ ಹಾಗೂ ಹಾಸಿಗೆಗಳಿವೆ. ಕೆಲವು ಬೆಡ್ ಗಲನ್ನು ಕೋವಿಡ್-19 ಸೋಂಕಿತರಿಗೆ  ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ. ಸೋಂಕು ವಿಪರೀತವಾಗಿ ಹರಡಿದ್ದೇ ಆದರೆ, ಪಿಜಿಗಳಲ್ಲಿರುವ ನಿವಾಸಿಗಳು ಅಧ್ಯಾಪಕರು, ಹಿರಿಯ ಶಿಶುವೈದ್ಯರು ಸೇರಿದಂತೆ ಪ್ರಸ್ತುತ ಕಾರ್ಯನಿರ್ವಹಿತ್ತಿರುವವರಿಗೆ ತರಬೇತಿ ನೀಡಲಾಗುತ್ತದೆ ಎಂದಿದ್ದಾರೆ.

"ಮಕ್ಕಳ ಪ್ರಕರಣಗಳನ್ನು ನಿರ್ವಹಿಸಲು ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚಿನ ವೈದ್ಯರು ಮತ್ತು ತಜ್ಞರು ಅವಶ್ಯಕವಿದೆ. ವಯಸ್ಕರಿಗೆ ಚಿಕಿತ್ಸೆನೀಡುತ್ತಿರುವ ವೈದ್ಯಕಿಗೆ ಮಕ್ಕಳ ಪ್ರಕರಣಗಳಿಗೂ ಚಿಕಿತ್ಸೆ ನೀಡಲು ತರಬೇತಿ ನೀಡಬೇಕಾಗುತ್ತದೆ. ಖಾಯಂ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುವುದು ಸುದೀರ್ಘ ಪ್ರಕ್ರಿಯೆಯಾಗಿದ್ದು,  ಗುತ್ತಿಗೆಗೆ ಸಿಬ್ಬಂದಿಗಳನ್ನು ನೇಮಿಸಿಕೊಳ್ಳಬಹುದಾಗಿದೆ. ವಯಸ್ಕರಿಗೆ ಹೆಚ್ಚೆಚ್ಚು ಲಸಿಕೆಯನ್ನು ನೀಡಿದ್ದೇ ಆದರೆ, ಸೋಂಕು ಪ್ರಕರಣ ಕಡಿಮೆಯಾಗುವ ನಿರೀಕ್ಷೆಗಳಿವೆ. ಆದರೆ, ಮಕ್ಕಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ  ಪೀಡಿಯಾಟ್ರಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಮಲ್ಲೇಶ್ ಕೆ ಅವರು ಹೇಳಿದ್ದಾರೆ. 

ಸಾಫ್ಟ್‌ವೇರ್ ಅನ್ನು ರೀಸೆಟ್ ಮಾಡುವ ಮೂಲಕ ಅಸ್ತಿತ್ವದಲ್ಲಿರುವ ಉನ್ನತ-ಮಟ್ಟದ ವೆಂಟಿಲೇಟರ್‌ಗಳು, ಸಿಪಿಎಪಿ ಯಂತ್ರಗಳು ಮತ್ತು ಎಚ್‌ಎಫ್‌ಎನ್‌ಸಿಗಳನ್ನು ಮಕ್ಕಳಿಗೆ ಬಳಕೆ ಮಾಡಬಹುದು ಎಂದು ಹೇಳಿದ್ದಾರೆ.

ಈ ನಡುವೆ ಕೊರೋನಾ 3ನೇ ಅಲೆ ಆಂತಕ ಸೃಷ್ಟಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಮಕ್ಕಳ ಕಾರ್ಯಪಡೆ ರಚನೆ ಮಾಡುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಸಿದ್ಧತೆ ಕುರಿತ ಪ್ರಶ್ನೆಗೆ ಉತ್ತರಿಸಿರುವ ಆರೋಗ್ಯ ಸಚಿವ ಸುಧಾಕರ್ ಅವರು, ಕೊರೋನಾ 3ನೇ ಅಲೆ  ಎದುರಿಸುವ ಕುರಿತು ಮಾರ್ಗದರ್ಶನ ಮತ್ತು ಸಲಹೆ ನೀಡಲು ತಜ್ಞರ ಸಮಿತಿಯನ್ನು ರಚಿಸುವುದಾಗಿ ಈಗಾಗಲೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT