ನಳಿನಿ ಗಣೇಶ್ 
ರಾಜ್ಯ

ಸೋಮವಾರಪೇಟೆ ಪಟ್ಟಣ ಪಂಚಾಯತ್ ಅಧ್ಯಕ್ಷೆ ನಳಿನಿ ಗಣೇಶ್ ಕೊರೋನಾಗೆ ಬಲಿ

ಸೋಮವಾರಪೇಟೆ ಪಟ್ಟಣ ಪಂಚಾಯತ್ ಅಧ್ಯಕ್ಷೆ ನಳಿನಿ ಗಣೇಶ್ ಕೊರೋನಾದಿಂದ ಸಾವನ್ನಪ್ಪಿದ್ದಾರೆ. 

ಸೋಮವಾರಪೇಟೆ: ಸೋಮವಾರಪೇಟೆ ಪಟ್ಟಣ ಪಂಚಾಯತ್ ಅಧ್ಯಕ್ಷೆ ನಳಿನಿ ಗಣೇಶ್ ಕೊರೋನಾದಿಂದ ಸಾವನ್ನಪ್ಪಿದ್ದಾರೆ.

ನಳಿನಿ 2020ರ ನವೆಂಬರ್‌ನಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದರು. ಇವರು ಸೋಮವಾರ ಪೇಟೆ ತಾಲೂಕು  ಜಾನಪದ ಪರಿಷತ್  ನ ನಿರ್ದೇಶಕಿ ಹಾಗೂ ಒಳ್ಳೆಯ ಗಾಯಕಿಯೂ ಹೌದು.

ಮಡಿಕೇರಿಯ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಳಿನಿ ಗಣೇಶ್ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ನಳಿನಿ ಗಣೇಶ್ ಅವರ ಅಕಾಲಿಕ  ನಿಧನಕ್ಕೆ ಶಾಸಕ ಎಂ ಪಿ ಅಪ್ಪಚ್ಚುರಂಜನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ .ಅವರ ಅಗಲಿಕೆಯ ಶೋಕವನ್ನು ತಡೆದುಕೊಳ್ಳುವ ಶಕ್ತಿ ಕುಟುಂಬವರ್ಗಕ್ಕೆ ದೊರಕಲಿ ಎಂದು ರಂಜನ್ ಪ್ರಾರ್ಥಿಸಿದ್ದಾರೆ.

ವಿಜಯಪುರ ಜಿಲ್ಲೆ ಗ್ರಾಮ ಪಂಚಾಯತ್ ಸದಸ್ಯ ಬ್ಲಾಕ್ ಫಂಗಸ್ ಗೆ ಬಲಿ

ವಿಜಯಪುರದ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯ ಸಿದ್ದಲಿಂಗಪ್ಪ ಮಲ್ಲಣ್ಣನವರ್ ಬ್ಲಾಕ್ ಫಂಗಸ್ ನಿಂದ ಸಾವನ್ನಪ್ಪಿದ್ದಾರೆ.

ಬ್ಲಾಕ್ ಫಂಗಸ್ ಕಾಣಿಸಿಕೊಂಡಿದ್ದ ಹಿನ್ನೆಲೆ ಸಿದ್ದಲಿಂಗಪ್ಪ ನವರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT