ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸ್ಪೀಕರ್ ಕೆಆರ್ ಪೇಟೆ ಕೃಷ್ಣ ಅವರು ವಿಧಿವಶರಾಗಿದ್ದಾರೆ.
ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೃಷ್ಣ ಅವರು ಮೈಸೂರಿನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೃಷ್ಣ ಅವರು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಕೊತ್ತಮಾರನಹಳ್ಳಿ ಗ್ರಾಮದವರಾಗಿದ್ದು ಅಲ್ಲೇ ಅವರ ಅಂತ್ಯಸಂಸ್ಕಾರ ನೆರವೇರಲಿದೆ.
ಕೃಷ್ಣ ಅವರು ಮೂರು ಬಾರಿ ಕೆಆರ್ ಪೇಟೆ ಕ್ಷೇತ್ರದಿಂದ ಶಾಸಕರಾಗಿದ್ದು 1996ರಲ್ಲಿ ಮಂಡ್ಯದ ಸಂಸದರಾಗಿ ಆಯ್ಕೆಯಾಗಿದ್ದರು.
ಇನ್ನು 1988ರಲ್ಲಿ ಎಸ್ ಆರ್ ಬೊಮ್ಮಾಯಿ ಸಂಪುಟದಲ್ಲಿ ಪಶುಸಂಗೋಪನೆ ಮತ್ತೆ ರೇಷ್ಮೆ ಸಚಿವರಾಗಿದ್ದ ಅವರು 2006ರಿಂದ 2008ರವರೆಗೆ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.