ರಾಜ್ಯ

ಜಮ್ಶೆಡ್ಪುರದಿಂದ ಸಂಪೂರ್ಣ ಮಹಿಳಾ ಸಿಬ್ಬಂದಿ ಚಾಲಿತ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ಆಗಮನ!

Sumana Upadhyaya

ಬೆಂಗಳೂರು: ಎಲ್ಲಾ ಮಹಿಳಾ ಸಿಬ್ಬಂದಿಯನ್ನು ಒಳಗೊಂಡ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ನಗರಕ್ಕೆ ನಿನ್ನೆ ಜಮ್ಶೆಡ್ಪುರದಿಂದ 120 ಮೆಟ್ರಿಕ್ ಟನ್ ಮೆಡಿಕಲ್ ಆಕ್ಸಿಜನ್ ಹೊತ್ತು ನಗರಕ್ಕೆ ಬಂದಿದೆ.

ಜಮ್ಶೆಡ್ಪುರದ ಟಾಟಾನಗರದಿಂದ ಬೆಂಗಳೂರಿಗೆ 7ನೇ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಆಗಮಿಸಿದ್ದು, ಈ ರೈಲಿನಲ್ಲಿ ಕೋವಿಡ್ ರೋಗಿಗಳಿಗೆ ಆಕ್ಸಿಜನ್ ನ್ನು ನಿರಂತರವಾಗಿ ಪೂರೈಸುವ ವೈದ್ಯಕೀಯ ಆಕ್ಸಿಜನ್ ಗಳಿದ್ದು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸುತ್ತಿದ್ದಾರೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದಾರೆ.

8ನೇ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಕೂಡ ಗುಜರಾತ್ ನ ಜಾಮ್ನಗರದಿಂದ ಬೆಂಗಳೂರಿಗೆ ತಲುಪಿದ್ದು ಅದರಲ್ಲಿ 109.2 ಮೆಟ್ರಿಕ್ ಟನ್ ಜೀವರಕ್ಷಕ ಅನಿಲವಿದ್ದು ಇಂದು ಬೆಳಗ್ಗೆ ಬೆಂಗಳೂರು ತಲುಪಿತು ಎಂದು ರೈಲ್ವೆ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಿನನಿತ್ಯ 1200 ಮೆಟ್ರಿಕ್ ಟನ್ ಗಳಷ್ಟು ಆಕ್ಸಿಜನ್ ಬೇಕಾಗಿದೆ.
ಕರ್ನಾಟಕದಲ್ಲಿ ನಿನ್ನೆ 32 ಸಾವಿರದ 218 ಹೊಸ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 353 ಸಾವು ಸಂಭವಿಸಿದೆ. ಒಟ್ಟು ಸೋಂಕಿತರ ಸಂಖ್ಯೆ 23 ಲಕ್ಷದ 67 ಸಾವಿರವಾಗಿದ್ದು ರಾಜ್ಯದಲ್ಲಿ ಇದುವರೆಗೆ 24 ಸಾವಿರದ 207 ಮಂದಿ ಮೃತಪಟ್ಟಿದ್ದಾರೆ.

SCROLL FOR NEXT