ರಾಜ್ಯ

ಬೆಂಗಳೂರಿನಲ್ಲಿ ಮುಂದಿನ 2 ದಿನ ಮಳೆ; ರಾಜ್ಯಾದ 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Shilpa D

ಬೆಂಗಳೂರು: ಮುಂದಿನ ಎರಡು ದಿನಗಳಲ್ಲಿ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆಯು ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.

ಮೇ 22 ರಂದು ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು, ಮೇ 22ರವರೆಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಸಂಜೆ 5.30 ರವರೆಗೆ ಬೆಂಗಳೂರು ನಗರದಲ್ಲಿ 21 ಮಿ.ಮೀ ಮಳೆಯಾಗಿದ್ದರೆ, ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 22.8 ಮಿ.ಮೀ ಮಳೆಯಾಗಿದೆ. ಏತನ್ಮಧ್ಯೆ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಾವುದೇ ಮಳೆಯಾಗಿಲ್ಲ. ಬೆಂಗಳೂರಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28.5 ಮತ್ತು 21.6 ಡಿಗ್ರಿ ಸೆಲ್ಸಿಯಸ್ ಆಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ.

ಸಂಜೆ 7 ಗಂಟೆವರೆಗೆ ಯಾವುದೇ ಪ್ರದೇಶದಲ್ಲಿ ಜಲಾವೃತವಾದ ವರದಿಯಾಗಿಲ್ಲ ಎಂದು ಬಿಬಿಎಂಪಿ ವಾರ್ ರೂಂ ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ಎರಡು ದಿನಗಳವರೆಗೆ ಮಳೆ ಅಥವಾ ಗುಡುಗು ಸಹಿತ ಬಲವಾದ ಗಾಳಿ ಬೀಸಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಐಎಂಡಿ ಪ್ರಕಾರ, 24 ಗಂಟೆಗಳ ಅವಧಿಯಲ್ಲಿ ಮಳೆ 64.5 ಮಿಮೀ ಮತ್ತು 115.5 ಮಿಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

SCROLL FOR NEXT