ರೆಮ್ ಡೆಸಿವಿರ್ 
ರಾಜ್ಯ

ಕೋವಿಡ್ ವಿರುದ್ಧ ಸಮರ: ರೆಮ್ ಡೆಸಿವಿರ್ ಹಂಚಿಕೆಗೆ ಆನ್ ಲೈನ್ ವ್ಯವಸ್ಥೆ ಜಾರಿ

ರೆಮ್ ಡೆಸಿವಿರ್  ನ ಅಕ್ರಮ ಮಾರಾಟವನ್ನು ತಪ್ಪಿಸುವ ಸಲುವಾಗಿ ರೆಮ್ ಡೆಸಿವಿರ್ ಹಂಚಿಕ್ಗೆ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಬೆಂಗಳೂರು: ರೆಮ್ ಡೆಸಿವಿರ್  ನ ಅಕ್ರಮ ಮಾರಾಟವನ್ನು ತಪ್ಪಿಸುವ ಸಲುವಾಗಿ ರೆಮ್ ಡೆಸಿವಿರ್ ಹಂಚಿಕ್ಗೆ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ರೆಮ್ ಡೆಸಿವಿರ್  ಹಂಚಿಕೆಗಾಗಿ ಇನ್ನು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದ್ದು ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು ಎಸ್.ಎಮ್.ಎಸ್.ಕಳುಹಿಸಲಾಗುತ್ತದೆ.

ಈ ಕುಯಿರುತಂತೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

"ಸಾರ್ವಜನಿಕರು https://covidwar.karnataka.gov.in/service2 ಲಿಂಕ್ ಮೂಲಕ ತಮಗೆ ಹಂಚಿಕೆಯಾಗಿರುವ ಔಷಧದ ಬಗ್ಗೆ ಮಾಹಿತಿ ಪಡೆಯಬಹುದು.

"ಒಂದು ವೇಳೆ ಸೋಂಕಿತ ವ್ಯಕ್ತಿಯ SRF IDಗೆ ರೆಮ್ಡೆಸಿವಿರ್ ಔಷಧ ಹಂಚಿಕೆಯಾಗಿ ಆಸ್ಪತ್ರೆ ಅದನ್ನು ಆ ವ್ಯಕ್ತಿಯ ಚಿಕಿತ್ಸೆಗೆ ಒದಗಿಸದಿದ್ದಲ್ಲಿ ಇದೇ ಲಿಂಕ್ ಮೂಲಕ ಸರ್ಕಾರಕ್ಕೆ ವರದಿ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.

"ಈ ಪಾರದರ್ಶಕ ವ್ಯವಸ್ಥೆಯಿಂದ ಕಾಳಸಂತೆ ಮಾರಾಟಕ್ಕೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕೋಣ." ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್